ಸಿಡ್ನಿ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಆಸೀಸ್ ನ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರು ಉಳಿದ ನಿಗದಿತ ಓವರ್ ಸರಣಿಯಿಂದ ಹೊರಬಿದ್ದಿದ್ದಾರೆ. ವೇಗಿ ಪ್ಯಾಟ್ ಕಮಿನ್ಸ್ ಅವರಿಗೂ ವಿಶ್ರಾಂತಿ ನೀಡಲಾಗಿದೆ.
ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಡೇವಿಡ್ ವಾರ್ನರ್ ಗಾಯಗೊಂಡಿದ್ದರು. ಕೂಡಲೇ ಅವರು ಮೈದಾನದಿಂದ ಹೊರನಡೆದಿದ್ದರು.
ಸೋಮವಾರ ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಅಧಿಕೃತ ಪ್ರಕಟಣೆ ತಿಳಿಸಿದ್ದು, ಡೇವಿಡ್ ವಾರ್ನರ್ ಬದಲಿಗೆ ಡಾರ್ಸಿ ಶಾರ್ಟ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಸತತ ಕ್ರಿಕೆಟ್ ನಿಂದ ಬಳಲಿರುವ ಪ್ಯಾಟ್ ಕಮಿನ್ಸ್ ಗೆ ವಿಶ್ರಾಂತಿ ನೀಡಲಾಗಿದೆ. ವಾರ್ನರ್ ಮತ್ತು ಕಮಿನ್ಸ್ ಇಬ್ಬರೂ ಟೆಸ್ಟ್ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ.
ಇದನ್ನೂ ಓದಿ:ಭಾರತ-ಆಸ್ಟ್ರೇಲಿಯ ಜೋಡಿಯ ಪ್ರೇಮಪರ್ವ!
ಮೊದಲೆರಡು ಪಂದ್ಯಗಳನ್ನು ಗೆದ್ದ ಆಸೀಸ್ ಸರಣಿ ಜಯಿಸಿದೆ. ಭಾರತ ಇನ್ನೂ ಒಂದ ಏಕದಿನ ಪಂದ್ಯ, ಮೂರು ಪಂದ್ಯಗಳ ಟಿ20 ಸರಣಿ ಮತ್ತು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.