Advertisement

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

07:54 PM Mar 23, 2023 | Team Udayavani |

ದಾವಣಗೆರೆ: ವ್ಯಕ್ತಿಯೊಬ್ಬನ ಕತ್ತು ಕೊಯ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಎಸ್.ಎಸ್.ಬಡಾವಣೆ ರಿಂಗ್ ರಸ್ತೆಯ ಆಫೀರ್ಸ್ ಕ್ಲಬ್ ಸಮೀಪ ಗುರುವಾರ ಬೆಳಗಿನ ಜಾವ ನಡೆದಿದೆ.

Advertisement

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ (35) ಕೊಲೆಯಾದವ ಎಂದು ಗುರುತಿಸಲಾಗಿದೆ.

ಮಹಾಂತೇಶ್ ಪುಟ್ಟಪ್ಪ ಚೌರದ ದಾವಣಗೆರೆಯಲ್ಲಿ ವಿವಾಹವಾಗಿದ್ದು, ಆಗಾಗ ದಾವಣಗೆರೆಯ ಬುದ್ಧ ಬಸವ ನಗರಕ್ಕೆ ಬರುತ್ತಿದ್ದ. ಯುಗಾದಿ ಹಬ್ಬಕ್ಕಾಗಿ ದಾವಣಗೆರೆಗೆ ಆಗಮಿಸಿದ್ದನು. ಪತ್ನಿಯ ಮನೆಯಿಂದ ನಾಪತ್ತೆಯಾಗಿದ್ದವ ಶವವಾಗಿ ಪತ್ತೆಯಾಗಿದ್ದಾನೆ. ಕೊಲೆಗೀಡಾಗಿರುವ ಮಹಾಂತೇಶ್ ಪುಟ್ಟಪ್ಪ ಚೌರದ ವಿರುದ್ಧ ಈಗಾಗಲೇ ಹಾವೇರಿ ಪೊಲೀಸ್ ಠಾಣೆಯಲ್ಲಿ ೧೦೯ ರಡಿ ಒಂದು ಪ್ರಕರಣ ದಾಖಲಾಗಿತ್ತು. ಅಲ್ಲದೆ ಈತ ಮದ್ಯವ್ಯಸನಿಯಾಗಿದ್ದನು ಎನ್ನಲಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next