Advertisement

ಅರುಣೋದಯ ಸಮುದಾಯ ಭವನ ಉದ್ಘಾಟನೆ 

03:36 PM Apr 17, 2017 | Team Udayavani |

ಮಡಿಕೇರಿ: ಪ್ರತಿಯೊಂದು ಸಮುದಾಯದ ಏಳಿಗೆಗಾಗಿ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಇದನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕೆಂದು ನಗರಸಭಾ ಅಧ್ಯಕ್ಷರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ ಕರೆ ನೀಡಿದ್ದಾರೆ.

Advertisement

ನಗರದ ಇಂದಿರಾನಗರ ಬಡಾವಣೆಯಲ್ಲಿ ಸುಮಾರು 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಅರುಣೋದಯ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರಸಭಾ ವ್ಯಾಪ್ತಿಯ ಎಲ್ಲ ವಾರ್ಡ್‌ಗಳ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಲಾಗಿದ್ದು, ಸಮುದಾಯ ಭವನಗಳು ಆಯಾ ವಾರ್ಡ್‌ನ ನಿವಾಸಿಗಳಿಗೆ ಕಾರ್ಯಕ್ರಮಗಳನ್ನು ನಡೆಸಲು ಹೆಚ್ಚು ಸಹಕಾರಿಯಾಗಿದೆ. ಇದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಮತ್ತು ವಾರ್ಡ್‌ನ ಬೇಡಿಕೆಗಳ ಬಗ್ಗೆ ಆಡಳಿತ ವ್ಯವಸ್ಥೆಯ ಗಮನ ಸೆಳೆಯಬೇಕೆಂದು ಸಲಹೆ ನೀಡಿದರು. ಇಂದಿರಾನಗರದ ಅಭಿವೃದ್ಧಿ ಬಗ್ಗೆ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭಾ ಸದಸ್ಯರಾದ ಪಿ.ಡಿ. ಪೊನ್ನಪ್ಪ ತಮ್ಮ ಆಡಳಿತಾವಧಿಯಲ್ಲಿ ಇಂದಿರಾನಗರ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿಕೊಂಡರು. ಎಲ್ಲ ವಾರ್ಡ್‌ಗಳ ನಿವಾಸಿಗಳು ಒಗ್ಗಟ್ಟಿನಿಂದ ಕೈಜೋಡಿಸಿ ಆಡಳಿತ ವ್ಯವಸ್ಥೆಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡುವ ಮೂಲಕ ನಗರದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕೆಂದರು.

ನಗರಸಭೆಯ ಸದಸ್ಯರೂ ಹಾಗೂ ಮಾಜಿ ಅಧ್ಯಕ್ಷರಾದ ಜುಲೇಕಾಬಿ, ಮಾಜಿ ಸದಸ್ಯರಾದ ಕೆ.ಟಿ. ಬೇಬಿ ಮ್ಯಾಥು, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಾದ ಎಚ್‌.ಎಲ್‌. ದಿವಾಕರ್‌, ಒಡಿಪಿ ವಲಯಾಧಿಕಾರಿ ಜಾಯ್ಸ ಮಿನೇಜಸ್‌, ಇಂದಿರಾನಗರದ ಶ್ರೀಕುಂದುರುಮೊಟ್ಟೆ ಮಾರಿಯಮ್ಮ ದೇವಾಲಯದ ಅಧ್ಯಕ್ಷರಾದ ಎಚ್‌.ಟಿ. ಶಿವಪ್ಪ ಮತ್ತಿತರ ಪ್ರಮುಖರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next