Advertisement

ಮೊದಲ ಪತ್ನಿ ಇರುವಾಗಲೇ ಪಾಕ್ ಮಹಿಳೆಯೊಂದಿಗೆ ಎರಡನೇ ಮದುವೆಯಾದ ದಾವೂದ್ ಇಬ್ರಾಹಿಂ

04:34 PM Jan 17, 2023 | Team Udayavani |

ಮುಂಬಯಿ: ಮೊದಲ ಪತ್ನಿಯ ಜೊತೆ ಸಂಸಾರ ನಡೆಸುತ್ತಿರುವ ವೇಳೆಯೇ ಭೂಗತ ಪಟಾಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿರುವ ಕುರಿತು ದಾವೂದ್ ಇಬ್ರಾಹಿಂ ಸೋದರಳಿಯ ಮಾಹಿತಿ ಬಿಚ್ಚಿಟ್ಟಿದ್ದಾನೆ.

Advertisement

ಈ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಂದೆ ದಾವೂದ್​ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಪಾರ್ಕರ್ ಹೇಳಿಕೆ ನೀಡಿದ್ದಾನೆ. ಅಲ್ಲದೆ ಪಾಕಿಸ್ತಾನದ ಪಠಾಣ್ ಮಹಿಳೆಯೊಂದಿಗೆ 2ನೇ ವಿವಾಹವಾಗಿದ್ದಾನೆಂದು ಎಂದು ಹೇಳಿದ್ದಾನೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಭಯೋತ್ಪಾದಕ ಜಾಲವನ್ನು ಬಹಿರಂಗಪಡಿಸುವ ವಿಚಾರವಾಗಿ ಎನ್ಐಎ ಅಧಿಕಾರಿಗಳು ಇತ್ತೀಚೆಗಷ್ಟೇ ಮುಂಬೈ ಸೇರಿದಂತೆ ಹಲವೆಡೆ ದಾಳಿ ನಡೆಸಿ ಹಲವರನ್ನು ಬಂಧಿಸಿತ್ತು. ದಾವೂದ್ ಇಬ್ರಾಹಿಂ ಭೂಗತ ಜಾಲದ ಬಗ್ಗೆ ಎನ್​ಐಎ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ.

ಈ ನಡುವೆ ಎನ್ಐಎ ಅಧಿಕಾರಿಗಳಿಗೆ ಮಾಹಿತಿ ನೀಡಿರುವ ದಾವೂದ್​ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಪಾರ್ಕರ್, ಮೊದಲ ಪತ್ನಿಗೆ ವಿಚ್ಛೇದನ ನೀಡಿರುವ ಬಗ್ಗೆ ದಾವೂದ್ ಸುಳ್ಳು ಹೇಳಿದ್ದು, ಈ ನಡುವೆ ಪಾಕಿಸ್ತಾನದ ಮಹಿಳೆಯೊಂದಿಗೆ 2ನೇ ಮದುವೆಯಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ದಾವೂದ್ ಕರಾಚಿಯಲ್ಲಿ ವಾಸವಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು ವಿ.ವಿ.ಯಲ್ಲಿ ಅಂಧ ಅತಿಥಿ ಉಪನ್ಯಾಸಕ; ಸಾಧನೆಗೆ ಅಡ್ಡಿಯಾಗದ ಅಂಧತ್ವ

Advertisement
Advertisement

Udayavani is now on Telegram. Click here to join our channel and stay updated with the latest news.

Next