Advertisement

ಸಾಮೂಹಿಕ ಅತ್ಯಾಚಾರ ಪ್ರಕರಣ ದೂರು ದಾಖಲಿಸಿದ ಬಾಲಕಿ ತಂದೆ ರಸ್ತೆ ಅಪಘಾತದಲ್ಲಿ ಸಾವು

02:25 PM Mar 10, 2021 | Team Udayavani |

ಕಾನ್ಪುರ್: 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರಪ್ರದೇಶದ ಕಾನ್ಪುರ್ ನಲ್ಲಿ ನಡೆದ ಎರಡು ದಿನದ ಬಳಿಕ ಸಂತ್ರಸ್ತೆಯ ತಂದೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬುಧವಾರ (ಮಾರ್ಚ್ 10) ನಡೆದಿದೆ.

Advertisement

ಸಾಮೂಹಿಕ ಅತ್ಯಾಚಾರ ಘಟನೆ ಬಗ್ಗೆ ತಂದೆ ಪೊಲೀಸರಿಗೆ ದೂರು ನೀಡಿದ್ದು, ಇಂದು ಮಗಳನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಆಸ್ಪತ್ರೆ ಹೊರಭಾಗದಲ್ಲಿ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಗೋಲು ಯಾದವ್ ತಂದೆ ಉತ್ತರಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗೋಲು ಯಾದವ್ ನನ್ನು ಬಂಧಿಸಿದ್ದರು ಕೂಡಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ದೂರು ದಾಖಲಿಸಿದ ನಂತರ ಆರೋಪಿಗಳ ಕುಟುಂಬ ನಿರಂತರವಾಗಿ ಬೆದರಿಕೆ ಹಾಕುತ್ತಿರುವುದಾಗಿ ಬಾಲಕಿಯ ಕುಟುಂಬ ಆರೋಪಿಸಿದ್ದು, ಆರೋಪಿಗಳ ಕುಟುಂಬಕ್ಕೆ ಪೊಲೀಸರು ಸಹಕಾರ ನೀಡುತ್ತಿರುವುದಾಗಿ ದೂರಿದೆ.

ಪ್ರಮುಖ ಆರೋಪಿ ಗೋಲು ಯಾದವ್ ಹಿರಿಯ ಸಹೋದರ ಕೂಡಾ ನಮಗೆ ಬೆದರಿಕೆ ಹಾಕಿದ್ದು, ಎಚ್ಚರ, ನನ್ನ ತಂದೆ ಸಬ್ ಇನ್ಸ್ ಪೆಕ್ಟರ್ ಎಂದು ಹೇಳಿರುವುದಾಗಿ ಬಾಲಕಿ ಕುಟುಂಬದ ಮತ್ತೊಬ್ಬ ಸದಸ್ಯರು ತಿಳಿಸಿರುವುದಾಗಿ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next