ಮುಂಬಯಿ: ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮುಂಬೈ ಬಿಜೆಪಿ ಕಚೇರಿಯಲ್ಲಿ ಸುಮಾರು ಮಧ್ಯಾಹ್ನ 12 ಗಂಟೆಗೆ ಚವಾಣ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಕಾಂಗ್ರೆಸ್ ರಾಜೀನಾಮೆ ನೀಡಿದ ಬೆನ್ನಲ್ಲೇ ಚವಾಣ್ ಬಿಜೆಪಿಗೆ ಸೇರುತ್ತಾರೆ ಎಂಬ ಗುಸು ಗುಸು ಸುದ್ದಿ ಹಬ್ಬಿತ್ತು ಅದರಂತೆ ಇಂದು ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಅಂಶ ಹೊರಬಿದ್ದಿದೆ.
ಮಾಜಿ ಮುಖ್ಯಮಂತ್ರಿ ಚವಾಣ್ ಅವರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಗೆ ಕಳುಹಿಸಿದ್ದರು. ಇದರ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಚವಾಣ್ ತಮ್ಮ ಮುಂದಿನ ಹೆಜ್ಜೆಯ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು ಆದರೆ ಒಂದು ದಿನದ ಬಳಿಕವೇ ಅವರು ಬಿಜೆಪಿ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ.
ಉಪಮುಖ್ಯಮಂತ್ರಿ ಮತ್ತು ರಾಜ್ಯದ ಬಿಜೆಪಿಯ ಉನ್ನತ ನಾಯಕ ದೇವೇಂದ್ರ ಫಡ್ನವೀಸ್ ಅವರು ಚವಾಣ್ ಅವರನ್ನು ಪಕ್ಷಕ್ಕೆ ಸ್ವಾಗತಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಇಂದು ಬಿಜೆಪಿ ಪಕ್ಷ ಸೇರಲಿರುವ ಮಾಜಿ ಮುಖ್ಯಮಂತ್ರಿ ಚವಾಣ್ ಅವರಿಗೆ ರಾಜ್ಯಸಭಾ ಸ್ಥಾನ ನೀಡಬಹುದು ಎಂದು ಮೂಲಗಳು ಹೇಳುತ್ತಿವೆ.
ಇದನ್ನೂ ಓದಿ: Tamil Nadu Minister: ಬಂಧನವಾಗಿ 8 ತಿಂಗಳ ಬಳಿಕ ರಾಜೀನಾಮೆ ನೀಡಿದ ತಮಿಳುನಾಡು ಸಚಿವ