ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ತೀತ್ವಾಲ್‌ನಲ್ಲಿ ಶಾರದಾ ದೇಗುಲ ದೇಗುಲ ಹಾಗೂ ಅದರ ನೂತನ ಗರ್ಭ ಗುಡಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ್ದಾರೆ.
ಇದನ್ನೂ ಓದಿ:ಏಜೆನ್ಸಿಗಳ ದುರುಪಯೋಗ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ 14 ವಿರೋಧ ಪಕ್ಷಗಳು
ಈ ಸ್ಥಳ ಗಡಿ ನಿಯಂತ್ರಣ ರೇಖೆಯಿಂದ ಕೇವಲ 500 ಮೀಟರ್ ದೂರದಲ್ಲಿ ಇದೆ ಎನ್ನುವುದು ಗಮನಾರ್ಹ. ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ಪುರಾಣಗಳಲ್ಲಿ ವರ್ಣಿಸಲಾಗಿರುವಂತೆ ಹೊಸ ದೇಗುಲ ವನ್ನು ನಿರ್ಮಿಸಲಾಗಿದೆ.
ಕರ್ನಾಟಕದ ಶೃಂಗೇರಿ ದೇಗುಲದ ಆಡಳಿತ ಮಂಡಳಿ ಕೊಡುಗೆಯಾಗಿ ನೀಡಿರುವ ಶಾರದಾ ದೇವಿಯ ವಿಗ್ರಹವನ್ನು ಅಲ್ಲಿ ಪ್ರತಿಷ್ಠಾಪಿಸಲಾಗಿದೆ. ದೇಗುಲಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಶಾ, ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ಧತಿಯ ಬಳಿಕ ತನ್ನ ಹಿಂದಿನ ವೈಭವಕ್ಕೆ ಮರಳುತ್ತಿದೆ ಎಂದು ಹೇಳಿದರು.
ಪಾಕಿಸ್ತಾನದ ಕರ್ತಾರ್ಪುರದಲ್ಲಿ ಇರುವ ಸಿಖ್ ಸಮುದಾಯದ ಪವಿತ್ರ ಕ್ಷೇತ್ರಕ್ಕೆ ಯಾವ ರೀತಿಯ ಅಭಿವೃದ್ಧಿಯನ್ನು ಮಾಡಲಾಗಿದೆಯೋ ಅದೇ ರೀತಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಶಾರಾದಾ ದೇವಿಯ ಮೂಲ ಪೀಠಕ್ಕೆ ಭಕ್ತರು ತೆರಳಲು ಎಲ್ಲಾ ರೀತಿಯ ಅನುಕೂಲ ಕಲ್ಪಿಸಿಕೊಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.