ಮುಂಬಯಿ: ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರನ್ನು ಮುಂಬಯಿ ಕ್ರೈಂ ಬ್ರ್ಯಾಂಚ್ ನ ಯುನಿಟ್ ಒಂದಕ್ಕೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅವರು ಮಹಾರಾಷ್ಟ್ರ ಎಟಿಎಸ್‌ನಲ್ಲಿ 3 ವರ್ಷಗಳ ಸೇವಾವಧಿಯನ್ನು ಪೂರ್ಣಗೊಳಿಸಿದ ಅನಂತರ ಬೇರೆಡೆಗೆ ವರ್ಗಾವಣೆಗೊಂಡು ಇದೀಗ ಮತ್ತೆ ಮುಂಬಯಿ ಕ್ರೈಂ ಬ್ರ್ಯಾಂಚ್‌ಗೆ ಸೇರ್ಪಡೆಗೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದಯಾ ನಾಯಕ್, ಮಹಾರಾಷ್ಟ್ರ ಎಟಿಎಸ್‌ನಲ್ಲಿ 3 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಅನಂತರ ಮುಂಬಯಿ ಕ್ರೈಂ ಬ್ರ್ಯಾಂಚ್‌ಗೆ ಸೇರಿದ್ದೇನೆ. ಎಲ್ಲರ ನಿರೀಕ್ಷೆಗಳನ್ನು ಈಡೇರಿಸಲು ಮತ್ತು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.