Advertisement

ಮೀನಿನ ಲಾರಿ- ಕಾರು ಅಪಘಾತ: ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಗೆ ಗಾಯ

10:13 AM Feb 06, 2021 | Team Udayavani |

ಮಂಗಳೂರು: ಮೀನಿನ ಲಾರಿ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ನಗರದಲ್ಲಿ ಸಂಭವಿಸಿದೆ.

Advertisement

ಶನಿವಾರ ಬೆಳಿಗ್ಗೆ 5.15 ರ ಸುಮಾರಿಗೆ ನಂತೂರು ಜಂಕ್ಷನ್ ಬಳಿ ಈ ಅಪಘಾತ ನಡೆದಿದೆ. ದಯಾನಂದ ಕತ್ತಲ್ ಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಪತಿ ಬದುಕಿದ್ದಾಗಲೇ ಡೆತ್‌ ಸರ್ಟಿಫಿಕೆಟ್‌ ಮಾಡಿಸಿದ ಪತ್ನಿ! ಕಾರಣವೇನು ಗೊತ್ತಾ?

ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿಗೆ ಕಾರು ಢಿಕ್ಕಿ ಹೊಡೆದಿದೆ. ದಯಾನಂದ ಕತ್ತಲ್ ಸಾರ್ ಅವರಿಗೆ ತಲೆಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ:ಜಗದೀಶ್ ಅಧಿಕಾರಿ ಕ್ಷಮೆ ಕೇಳದಿದ್ದಲ್ಲಿ ಪ್ರತಿಭಟನೆ : ಧನಂಜಯ ಮಟ್ಟು

Advertisement

Udayavani is now on Telegram. Click here to join our channel and stay updated with the latest news.

Next