Advertisement

ಪಾಲಿಕೆ ಚುನಾವಣೆಯಲ್ಲಿ ಸೋಲು: ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ

04:52 PM Dec 11, 2022 | Team Udayavani |

ಹೊಸದಿಲ್ಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆಹೊತ್ತು ದೆಹಲಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ.

Advertisement

ಬಿಜೆಪಿಯ ದೆಹಲಿ ಘಟಕದ ಉಪಾಧ್ಯಕ್ಷ ವೀರೇಂದ್ರ ಸಚ್‌ದೇವ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಫಲಿತಾಂಶ ಕಳೆದ ಬುಧವಾರ ಪ್ರಕಟವಾಗಿತ್ತು.

250 ಸದಸ್ಯ ಬಲದ ಪಾಲಿಕೆಯಲ್ಲಿಆಮ್‌ ಆದ್ಮಿ ಪಕ್ಷ 134 ಹಾಗೂ ಬಿಜೆಪಿ 104 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.
ಕಾಂಗ್ರೆಸ್‌ ಕೇವಲ 9 ಸ್ಥಾನಗಳಲ್ಲಿ ಮಾತ್ರ ಜಯ ಗಳಿಸಿದೆ. ಮೂವರು ಸ್ವತಂತ್ರ ಅಭ್ಯರ್ಥಿಗಳೂ ಗೆದ್ದಿದ್ದಾರೆ.

ದಿಲ್ಲಿ ಮಹಾನಗರ ಪಾಲಿಕೆಯ ಗದ್ದುಗೆ ಆಮ್‌ ಆದ್ಮಿ ಪಕ್ಷದ ಪಾಲಾಗಿದ್ದು, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next