Advertisement

Bengaluru: ಕಣ್ಣುಕುಕ್ಕುವ ಹೆಡ್‌ಲೈಟ್‌ ಹಾಕಿದ್ರೆ ಪ್ರಕರಣ: ಎಡಿಜಿಪಿ ಅಲೋಕ್‌

11:41 AM Jun 19, 2024 | Team Udayavani |

ಬೆಂಗಳೂರು: ಕೇಂದ್ರ ಮೋಟಾರ್‌ ಕಾಯ್ದೆ (ಸಿಎಂವಿ) ಅನ್ವಯವೇ ಎಲ್ಲಾ ವಾಹನಗಳಿಗೆ ಕಡ್ಡಾಯ ವಾಗಿ ಹೆಡ್‌ಲೈಟ್‌ಗಳನ್ನು ಅಳವಡಿಸಿ ಕೊಳ್ಳ ಬೇಕು ಎಂದು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚು ವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

Advertisement

ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಅದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ ಟ್ರಕ್‌, ಬಸ್‌ಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನಗಳ ಸವಾರರಿಗೆ ತೊಂದರೆ ಆಗುತ್ತಿದೆ. ಅಲ್ಲದೆ, ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ.

ಆದ್ದರಿಂದ ಎಲ್ಲಾ ವಾಹನ ಸವಾರರು ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆ ಯಲ್ಲಿ ನಮೂದಿಸಿರುವ ಮಾನದಂಡ ದಂತೆ ಅಳವಡಿಸಬೇಕಾಗಿರುವ ಹೆಡ್‌ ಲೈಟ್‌ಗಳನ್ನೇ ಅಳವಡಿಸಬೇಕಾಗಿರು ವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮ ಗಳನ್ನು ಉಲ್ಲಂಘಿಸಿದಲ್ಲಿ ಕೇಸ್‌ ದಾಖಲಿಸ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಜತೆಗೆ ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಿ, ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪ ಅಳವಡಿಸಿರುವುದು ಕಂಡು ಬಂದರೆ ಜುಲೈನಲ್ಲಿ ಕ್ರಮಕೈಗೊಳ್ಳಲು ಅವರು ಆದೇಶದಲ್ಲಿ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next