Advertisement

ಡಿ.ಬಿ.ಚಂದ್ರೇಗೌಡ ಪುತ್ರಿ ಕಾಂಗ್ರೆಸ್‌ಗೆ

06:30 AM Jan 04, 2018 | |

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡ ಅವರ ಪುತ್ರಿ ವೀಣಾ ಗೌಡ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ.

Advertisement

ಮುಂಬೈನಲ್ಲಿ ವಕೀಲಿ ವೃತ್ತಿಯಲ್ಲಿರುವ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿಯಾಗಿರುವ ವೀಣಾ ಅವರು ಕಾಂಗ್ರೆಸ್‌ ಸೇರುವ ಕುರಿತಂತೆ ತಮ್ಮ ತಂದೆಯ ಜೊತೆಗೂ ಮಾತುಕತೆ ನಡೆಸಿದ್ದು, ಅವರೂ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರೊಂದಿಗೂ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ  ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಒಂದು ವೇಳೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗದಿದ್ದರೆ, 2019 ರ ಲೋಕಸಭೆ ಚುನಾವಣೆಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next