Advertisement
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳ ಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳು ಇನ್ನು ಮುಂದೆ ಕಡ್ಡಾಯವಾಗಿ ಇ-ಆಫೀಸ್ (ಪೇಪರ್ ಲೆಸ್) ನಲ್ಲಿಯೇ ಕಾರ್ಯ ನಿರ್ವ ಹಿಸುವಂತೆ ನಿರ್ದೇಶನ ನೀಡಿದ ಅವರು, ಯಾವ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನಕ್ಕೆ ತೊಡಕಾಗಿದೆ, ಯಾವ ಕಾರಣ ಕ್ಕಾಗಿ ಅದು ಆಗಿದೆ ಎಂದು ವಿಚಾರಿಸಿದರು.
Advertisement
ಸರಕಾರದ ಮಟ್ಟದಲ್ಲಿ ಎಲ್ಲಾ ಇಲಾಖೆ ಗಳು ಈಗ ಇ-ಕಚೇರಿಗಳ ಮೂಲಕವೇ ಕಾರ್ಯನಿರ್ವಹಿಸುತ್ತಿವೆ, ಆರ್ಥಿಕ ಇಲಾಖೆಯವರು ಇ-ಆಫೀಸ್ ಮೂಲಕ ಕಡತ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡುತ್ತಿ ದ್ದಾರೆ. ಸಾಮಾಜಿಕ ಭದ್ರತಾ ಯೋಜನೆಗಳಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಕ್ಯಾಂಪ್‌ಗ್ಳನ್ನು ಆಯೋಜಿಸಿ, ಅಲ್ಲಿ ಅರ್ಹರಿರುವ ಫಲಾನುಭವಿಗಳನ್ನು ಗುರುತಿಸಿ, ವಿವಿಧ ಯೋಜನೆಗಳಲ್ಲಿ ಪಿಂಚಣಿ ನೀಡಬೇಕು ಎಂದು ಹೇಳಿದರು.
ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ಮಲೇರಿಯಾ-ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ಸ್ಪಚ್ಚತೆ ಕಾಪಾಡುವ ಮೂಲಕ ಈ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು, ಅದೇ ರೀತಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಬಂದರು, ಕುದ್ರೋಳಿ ಹಾಗೂ ಶಕ್ತಿನಗರದಲ್ಲಿ ಈ ಪ್ರಕರಣಗಳು ಹೆಚ್ಚು ಕಂಡುಬರುತ್ತಿದ್ದು, ಅಲ್ಲಿ ಮಹಾನಗರ ಪಾಲಿಕೆಯವರು ಸ್ವತ್ಛತೆಗೆ ಹೆಚ್ಚಿನ ಗಮನಹರಿಸಬೇಕು, ಬ್ಲಿಡ್ ಬ್ಯಾಂಕ್‌ಗಳಲ್ಲಿ ಅಗತ್ಯ ರಕ್ತ ಲಭಿಸುವಂತಿರಬೇಕು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪ್ರಕರಣ ಕಡಿಮೆಯಾಗಿದೆ ಎಂದರು.
ಇತ್ತೀಚೆಗೆ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದಾಗ ಶಿಕ್ಷಣ ಸೂಚ್ಯಂಕ ದಲ್ಲಿ ಇಳಿಮುಖವಾದ ಬಗ್ಗೆ ಪ್ರಸ್ತಾವವಾಗಿತ್ತು, ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಣ ಇಲಾಖೆಯಿಂದ ಉತ್ತಮ ಕ್ರಮಗಳನ್ನು ರೂಪಿಸಬೇಕು, ಕ್ಷೀರಭಾಗ್ಯ, ಮೊಟ್ಟೆ ವಿತರಣೆಯಲ್ಲಿ ಯಾವುದೇ ಲೋಪ ಕಂಡುಬರಬಾರದು, ಜಿಲ್ಲೆಯಲ್ಲಿನ ಶಿಥಿಲಗೊಂಡ ಶಾಲಾ ಕೊಠಡಿಗಳ ದುರಸ್ತಿಯಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಡಿಡಿಪಿಐಗೆ ತಾಕೀತು ಮಾಡಿದರು.
ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಗುರುತಿಸಿ, ಅವರನ್ನು ಒಂದೊಂದು ತಾಲೂಕುಗಳ ನೋಡಲ್ ಅಧಿಕಾರಿಗಳಾಗಿ ನೇಮಿಸಬೇಕು, ಅವರು ತಮ್ಮ ಇಲಾಖೆಯ ಕಾರ್ಯಚಟುವಟಿಕೆಯೊಂದಿಗೆ ಅವರಿಗೆ ವಹಿಸಲಾದ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆಯ ಮೂಲಕ ನಡೆಯುವ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ, ಕಟ್ಟಡದ ಸ್ಥಿತಿಗತಿಗಳು, ಅಲ್ಲಿನ ಕುಂದುಕೊರತೆಗಳು, ಅಲ್ಲಿ ನೀಡುವ ಊಟ ಉಪಹಾರ ಸೇವಿಸುವುದು, ಅಲ್ಲಿಯ ಸ್ವತ್ಛತೆಯ ಬಗ್ಗೆ ವರದಿ ನೀಡವುದು ಹಾಗೂ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವರದಿ ನೀಡುವಂತಹ ಕೆಲಸ ಮಾಡಬೇಕು. ಪ್ರತಿ ಹಾಸ್ಟೆಲ್ ನಲ್ಲಿ ಮೆನ್ಯು ಇರಲೇಬೇಕು. ಅದೇ ರೀತಿ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಹಾಗೂ ಆಹಾರ ಸುರಕ್ಷಿತವಾಗಿರುವ ಬಗ್ಗೆ ಖಾತ್ರಿ ಪಡಿಸಬೇಕು ಎಂದರು.
ಜಿ. ಪಂ. ಸಿಇಒ ಡಾ|ಆನಂದ್ ಕೆ., ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ, ಮಹಾನಗರ ಪಾಲಿಕೆ ಆಯುಕ್ತ ಆನಂದ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಪಾಲ್ಗೊಂಡರು.