ಬಳ್ಳಾರಿ: ಐತಿಹಾಸಿಕ ಹಂಪಿಯಲ್ಲಿ ಇಂದು ಮುಂಜಾನೆ ಭೂಕಂಪ ನಡೆದಿದೆ ಎಂದು ಸುದ್ದಿ ಹರಿದಾಡುತ್ತಿದೆ. ಅದರೆ ಈ ಸುದ್ದಿ ನಿಜವಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇಂದು ಮುಂಜಾನೆ 6.55ರ ಸುಮಾರಿಗೆ ಪಾರಂಪರಿಕ ತಾಣ ಹಂಪಿಯಲ್ಲಿ ಲಘು ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.0ರಷ್ಟು ಇತ್ತು ಎಂಬ ಸುದ್ದಿ ಹರಿದಾಡಿತ್ತು. ಆದರೆ ಇದು ನಿಜವಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಾಗಿದೆ.
ಹಂಪಿಯಲ್ಲಿ ಯಾವುದೇ ರೀತಿಯ ಭೂಕಂಪನವಾಗಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳೂ ಸ್ಪಷ್ಟಪಡಿಸಿದ್ದಾರೆ.
ಇದೇ ಸಮಯದಲ್ಲೂ ಜಾರ್ಖಂಡ್ ನ ಜಮ್ಶೆಡ್ ಪುರದಲ್ಲೂ ಭೂಕಂಪನ ನಡೆದಿದೆ ಎಂದು ವರದಿಯಾಗಿದೆ. ಇಲ್ಲಿ 4.7 ತೀವ್ರತೆಯ ಭೂಕಂಪನವಾಗಿದೆ ಎನ್ನಲಾಗಿದೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿರುವ ಹಂಪಿಯನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಎಂದು ಘೋಷಿಸಿತ್ತು. ತುಂಗಭದ್ರ ನದಿಯ ತಟದಲ್ಲಿರುವ ಹಂಪಿಯು ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿತ್ತು.