Advertisement

Udupi ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

09:06 PM Jul 23, 2023 | Team Udayavani |

ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಭಾನುವಾರ ಸಂಜೆ ಬೈಂದೂರು ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಮಾತ್ರ  ರಜೆ ಘೋಷಿಸಿದ್ದರು. ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರಿ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next