Advertisement

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ|ರಾಜೇಂದ್ರ ಸೂಚನೆ

01:14 AM Dec 02, 2021 | Team Udayavani |

ಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯ ಕುರಿತು ನಗರದಲಲ್ಲಿ ಹಮ್ಮಿಕೊಳ್ಳ
ಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ದಾಖಲಾತಿಗಳ ಪ್ರಕಾರ ಜಿಲ್ಲೆಯಲ್ಲಿ 644 ಕೆರೆಗಳಿವೆ, ಇನ್ನೂ ಹೆಚ್ಚುವರಿ ಕೆರೆಗಳಿದ್ದಲ್ಲಿ ಆರ್‌ಟಿಸಿಯನ್ನು ತಪಾಸಣೆ ಮಾಡಿ, ಕೂಲಂಕುಷವಾಗಿ ಪರಿಶೀಲಿಸಿ, ಈ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು, ಒತ್ತುವರಿ ತೆರವು ಗೊಂಡಿರುವ ಕೆರೆಗಳ ದಂಡೆಗಳಲ್ಲಿ ಗಿಡಗಳನ್ನು ನೆಡಬೇಕು, ಅವುಗಳ ಸುಂದರೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಇದೇ ಡಿ.31ರೊಳಗೆ ಸೂಕ್ತ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಜಿಲ್ಲೆಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

140 ಹೆಚ್ಚುವರಿ ಕೆರೆ
ಭೂದಾಖಲೆಗಳ ಇಲಾಖೆಯ ಉಪ ನಿರ್ದೇಶಕರು ಕೆರೆಗಳ ಸರ್ವೆ ಕಾರ್ಯವನ್ನು ಕೈಗೊಳ್ಳಬೇಕು, ಮಂಗಳೂರು ತಾಲೂಕಿನಲ್ಲಿಯೇ 306 ಕೆರೆಗಳಿದ್ದು, 140 ಹೆಚ್ಚುವರಿ ಕೆರೆಗಳಿರುವುದಾಗಿ ತಹಶೀಲ್ದಾರ್‌ ಗುರುಪ್ರಸಾದ್‌ ಮಾಹಿತಿ ನೀಡಿದ್ದಾರೆ, ಈ ಬಗ್ಗೆ ಸರ್ವೆನಡೆಸಬೇಕು, ಅವುಗಳನ್ನು ಆರ್‌ಟಿಸಿ ಮೂಲಕ ಪತ್ತೆ ಮಾಡುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕಿ ಗಾಯತ್ರಿ ನಾಯಕ್‌, ಸಹಾಯಕ ಆಯುಕ್ತ ಮದನ್‌ ಮೋಹನ್‌, ಡಿಡಿಎಲ್‌ಆರ್‌ ನಿರಂಜನ್‌, ತಹಶೀಲ್ದಾರ್‌ ಗುರುಪ್ರಸಾದ್‌ ಮತ್ತು ಸಂಬಂಧ ಪಟ್ಟ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ದೂರು ಸಲ್ಲಿಸಲು ಮನವಿ
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಮೆಯ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ಜಿಲ್ಲಾ ಕೆರೆ ಸಮಿತಿ ಈಗಾಗಲೇ ರಚನೆಯಾಗಿದೆ. ಜಿಲ್ಲೆಯ ಕೆರೆಗಳ ಸಂರಕ್ಷಣೆಗೆಸಂಬಂಧಿಸಿ ಸಾರ್ವಜನಿಕರು ದೂರುಗಳನ್ನು ಸಮಿತಿಯ ಇ-ಮೇಲ್‌ tdadakshinakannada@gmail.com ಗೆ ಸ‌ಲ್ಲಿಸ ಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಕಚೇರಿ ದೂರವಾಣಿ ಸಂ: 0824-2440720ಗೆ ಸಂಪರ್ಕಿಸ ಬಹುದಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next