Advertisement

ಕಿತ್ತೂರು ಉತ್ಸವ ಸಿದ್ಧತೆ ಪರಿಶೀಲಿಸಿದ ಡಿಸಿ-ದೊಡಗೌಡ್ರ

09:29 PM Oct 23, 2021 | Team Udayavani |

ಬೆಳಗಾವಿ: ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ವೀರರಾಣಿ ಚನ್ನಮ್ಮನ ಕಿತ್ತೂರು ಉತ್ಸವದ ಬೆಳ್ಳಿಹಬ್ಬಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ಸವ ಉದ್ಘಾಟಿಸಲು ಆಗಮಿಸಲು ಬರುತ್ತಿರುವುದು ಸಂಭ್ರಮ ಇಮ್ಮಡಿಯಾಗಿದೆ. ಕಿತ್ತೂರು ಉತ್ಸವದ ಮುಖ್ಯ ವೇದಿಕೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪರಿಶೀಲಿಸಿದರು.

Advertisement

ಜನರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಕುಡಿಯುವ ನೀರು ಮತ್ತಿತರ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಅದೇ ರೀತಿ ಬೇರೆ ಬೇರೆ ಊರುಗಳಿಂದ ಆಗಮಿಸುವ ಕಲಾವಿದರಿಗೆ ಊಟ ಹಾಗೂ ಸಾರಿಗೆ ಸೌಕರ್ಯ ಒದಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು. ಹೆಚ್ಚಿನ ಜನರು ಸೇರುವ ನಿರೀಕ್ಷೆ ಇರುವುದರಿಂದ ಅಗತ್ಯ ಆಸನ ವ್ಯವಸ್ಥೆ ಮಾಡುವಂತೆ ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡ್ರ ತಿಳಿಸಿದರು.

ಮಾಧ್ಯಮ ಕೇಂದ್ರ ಉದ್ಘಾಟನೆ: ಉತ್ಸವದ ಮುಖ್ಯ ವೇದಿಕೆ ಹಿಂಭಾಗದಲ್ಲಿ ಸ್ಥಾಪಿಸಲಾಗಿರುವ ಸುಸಜ್ಜಿತ ಮಾಧ್ಯಮ ಕೇಂದ್ರವನ್ನು ಶಾಸಕ ಮಹಾಂತೇಶ ದೊಡ್ಡಗೌಡ್ರ ಹಾಗೂ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಉದ್ಘಾಟಿಸಿದರು. ಈ ಬಾರಿ ಕಲ್ಮಠದ ಆವರಣದಲ್ಲಿರುವ ಶ್ರೀ ಗುರುಸಿದ್ಧೇಶ್ವರ ಪ್ರೌಢಶಾಲಾ ಮೈದಾನದಲ್ಲಿ ವಸ್ತುಪ್ರದರ್ಶನ ಮಳಿಗೆ ಸ್ಥಾಪಿಸಲಾಗಿದೆ. ಸಮಾರಂಭದ ಮುಖ್ಯ ವೇದಿಕೆ, ಮಾಧ್ಯಮ
ಕೇಂದ್ರ, ವಸ್ತುಪ್ರದರ್ಶನ ಮಳಿಗೆ ಮತ್ತಿತರ ವ್ಯವಸ್ಥೆಯನ್ನು ಪರಿಶೀಲಿಸಿದರು. ಎಸ್‌ಪಿ ಲಕ್ಷ್ಮಣ ನಿಂಬರಗಿ ಭದ್ರತಾ ವ್ಯವಸ್ಥೆ ಕುರಿತು ಪರಿಶೀಲಿಸಿದರು.

ಮುಖ್ಯ ವೇದಿಕೆ, ಪಾರ್ಕಿಂಗ್‌, ಮಾಧ್ಯಮ ಗ್ಯಾಲರಿ ಸೇರಿದಂತೆ ಎಲ್ಲ ವ್ಯವಸ್ಥೆ ಪರಿಶೀಲಿಸಿದ ಅವರು, ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಯಾವುದೇ ರೀತಿಯ ಅನಾನುಕೂಲಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸ್‌ ಅ ಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೈಲಹೊಂಗಲ ಎಸಿ ಶಶಿಧರ ಬಗಲಿ, ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ತಹಶೀಲ್ದಾರ್‌ ಸೋಮಲಿಂಗಪ್ಪ ಹಾಲಗಿ ಹಾಗೂ ಸ್ಥಳೀಯ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next