Advertisement

ಅಪಘಾತಕ್ಕೆ ಕಾರಣ ಗುರುತಿಸಿ ಸರಿಪಡಿಸಿ: ಡೀಸಿ

03:03 PM Jul 04, 2023 | Team Udayavani |

ಮೈಸೂರು: ಅಪಘಾತ ಉಂಟಾಗಲು ಇರುವ ಕಾರಣಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ಕೈ ಗೊಂಡು ಅಪಘಾತ ಪ್ರಕರಣಗಳಿಂದ ಆಗುವ ಸಾವು, ನೋವುಗಳನ್ನು ಕಡಿಮೆ ಮಾಡಬೇಕು ಎಂದು ಡೀಸಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಲ್ಮೆಟ್‌ ಧರಿಸದೆ ಇರುವುದು, ಸೀಟ್‌ ಬೆಲ್ಟ್ ಹಾಕದೆ ಇರುವುದು, ಅಜಾಗರೂಕತೆಯಿಂದ ಚಾಲನೆ ಹಾಗೂ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದು, ಚಾಲಕರ ನಿರ್ಲಕ್ಷ್ಯ, ರಸ್ತೆಗಳ ದುರಸ್ತಿ ಅಥವಾ ಸರಿಯಾಗಿ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸದೆ ಇರುವುದು ಅಪಘಾತಗಳಿಗೆ ಕಾರಣವಾಗಬಹುದು. ಈ ರೀತಿಯ ನಿಯಮಗಳ ಉಲ್ಲಂಘನೆಗಳನ್ನು ವಾಹನ ಚಾಲಕರು ಮಾಡಬಾರದು ಎಂದರು.

ನಗರದ ದೊಡ್ಡ ಆಲದ ಮರ, ವರಕೂಡು ಗೇಟ್‌, ಮೈಸೂರು ಹುಣಸೂರು ರಸ್ತೆ ಹಿನಕಲ್‌ ಜಂಕ್ಷನ್‌, ಬಂಡಿಪಾಳ್ಯ, ನಂಜನಗೂಡು ಎಪಿಎಂಸಿ ಹಾಗೂ ನಗರದ ಜೆಎಲ್‌ಬಿ ರಸ್ತೆ ಜಂಕ್ಷನ್‌ಗಳಲ್ಲಿ ಕಳೆದ ಫೆಬ್ರವರಿ ತಿಂಗಳಿನಿಟದ ಮೇ ತಿಂಗಳಿನವರೆಗೆ ಜಿಲ್ಲಾ ವ್ಯಾಪ್ತಿ ಯಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸಿದ್ದು, ಇವುಗಳನ್ನು ಬ್ಲ್ಯಾಕ್‌ ಸ್ಪಾಟ್‌ಗಳಾಗಿ ಗುರುತಿಸಲಾಗಿದೆ. ಹೆಚ್ಚು ಅಪಘಾತ ಆಗುತ್ತಿರುವ ವಲಯಗಳನ್ನು ಗುರುತಿಸಿ ಎಚ್ಚರಿಕೆ ಬೋರ್ಡ್‌ ಹಾಕಬೇಕು. ಈ ಬ್ಲಾಕ್‌ ಸ್ಪಾಟ್‌ಗ ಳಲ್ಲಿ ಚಾಲಕರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಎಂದು ತಿಳಿಸಿದರು.

ಸಣ್ಣ ವಾಹನಗಳಿಗೆ ಚಲಿಸಲು ಅವಕಾಶ ನೀಡಿ: ದೊಡ್ಡ ವಾಹನಗಳನ್ನು ಚಾಲನೆ ಮಾಡುವವರು ಸಣ್ಣ ವಾಹನಗಳಿಗೆ ಚಲಿಸಲು ಅವಕಾಶ ಮಾಡಿಕೊಡ ಬೇಕು. ಮೆಟ್ರೋಪೋಲ್‌ ಸಿಗ್ನಲ್‌ ನಲ್ಲಿ ಕೆ.ಎಸ್‌.ಆರ್‌ .ಟಿ.ಸಿ ಬಸ್‌ಗಳನ್ನು ನಿಲುಗಡೆ ಮಾಡುತ್ತಿದ್ದು ಸ್ವಲ್ಪ ಮುಂದೆ ಬಸ್‌ಗಳನ್ನು ನಿಲ್ಲಿಸಬೇಕು. ಈ ಸಂಬಟಧ ಒಬ್ಬ ಸಿಬ್ಬಂದಿಯನ್ನು ನೇಮಿಸಿ ಕ್ರಮ ವಹಿಸುವಂತೆ ಕೆ. ಎಸ್‌.ಆರ್‌.ಟಿ.ಸಿ ವಿಭಾಗೀಯ ನಿಯಂತ್ರಣಾಧಿ ಕಾರಿಗಳಿಗೆ ಸೂಚಿಸಿದರು.

ಕೌನ್ಸಲಿಂಗ್‌ ಹಾಗೂ ಅರಿವು ಕಾರ್ಯಕ್ರಮ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್‌ ಮಾತನಾಡಿ, ಮೈಸೂರು ಜಿÇÉಾ ವ್ಯಾಪ್ತಿಯಲ್ಲಿ ಮೇ ತಿಂಗಳಿನಲ್ಲಿ 39 ಅಪಘಾತಗಳು ಸಂಭವಿಸಿದ್ದು 43 ಜನ ಮರಣ ಹೊಂದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ ಚಾಲಕರು ರ್ಯಾಶ್‌ ಡ್ರೈವ್‌ ಮಾಡುತ್ತಿದ್ದು, ಕಳೆದ ತಿಂಗಳಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಂದ 10 ಅಪಘಾತಗಳು ಉಂಟಾಗಿದೆ. ಇದ ರಿಂದ 7 ಮಾರಣಾಂತಿಕ ಅಪಘಾತಗಳು ಮತ್ತು 8 ಸಾವು ಸಂಭವಿಸಿವೆ. ಆದ್ದರಿಂದ ಅವರಿಗೆ ಸೂಕ್ತ ತರಬೇತಿ, ಕೌನ್ಸಲಿಂಗ್‌ ಹಾಗೂ ಅರಿವು ಕಾರ್ಯಕ್ರಮಗಳನ್ನು ನೀಡಿ ಎಂದು ಸೂಚಿಸಿದರು.

Advertisement

ಸಭೆಯಲ್ಲಿ ಮೈಸೂರು ನಗರ ಸಂಚಾರ ವಿಭಾಗದ ಡಿಸಿಪಿ ಜಾಹ್ನವಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next