Advertisement

ಡಿಸಿ ಹಿರೇಮಠ ವರ್ಗಾವಣೆ

02:42 PM Jun 30, 2020 | Suhan S |

ಗದಗ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಅವರ ಸ್ಥಾನಕ್ಕೆ ಸುಂದರೇಶ್‌ ಬಾಬು ಎಂ. ಅವರನ್ನು ವರ್ಗಾಹಿಸಿ ಸರಕಾರ ಆದೇಶ ಹೊರಡಿಸಿದೆ. 2018ರ ಆಗಸ್ಟ್‌ 6ರಂದು ಗದಗ ಜಿಲ್ಲಾಧಿ ಕಾರಿಯಾಗಿ ಅಧಿ ಕಾರ ಸ್ವೀಕರಿಸಿದ್ದ ಎಂ.ಜಿ. ಹಿರೇಮಠ ಅವರು, ಒಂದೂವರೆ ವರ್ಷಗಳಲ್ಲಿ ಜಿಲ್ಲೆಯ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು, ಸೈ ಎನಿಸಿಕೊಂಡಿದ್ದಾರೆ.

Advertisement

ಜಿಲ್ಲೆಗೆ ಆಗಮಿಸುತ್ತಿದ್ದಂತೆ 2018ರ ಸೆಪ್ಟೆಂಬರ್‌ನಿಂದ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಹಾಗೂ ಗ್ರಾಮಸ್ಥರೊಂದಿಗೆ ಸಂವಾದ ನಡೆಸುವ ಮೂಲಕ ಸ್ಥಳೀಯ ಸಮಸ್ಯೆಗಳು, ಸರಕಾರದ ಯೋಜನೆಗಳನ್ನು ಪರಿಣಾಮಕಾರಿ ಜಾರಿಗೊಳಿಸುವ ಪ್ರಯತ್ನ ನಡೆಸಿದರು. ಲಿಂಗ ಸಮಾನತೆಗಾಗಿ ಕೇಂದ್ರ ಸರಕಾರ ಜಾರಿಗೊಳಿಸಿರುವ “ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕೇಂದ್ರ ಸರಕಾರ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಜಿಲ್ಲಾಡಳಿತ ಪಾತ್ರವಾಗಿದೆ. 2018-19 ಹಾಗೂ 2019-20ನೇ ಸಾಲಿಗೆ ಸತತ ಎರಡು ಬಾರಿ ಲಭಿಸಿದ ಪ್ರಶಸ್ತಿಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪ್ರಶಸ್ತಿ ಸ್ವೀಕರಿಸಿದ್ದಾರೆ. 2019ರ ಆಗಸ್ಟ್‌ನಿಂದ ಡಿಸೆಂಬರ್‌ ಮಧ್ಯೆ ಮೂರು ಬಾರಿ ಜಿಲ್ಲೆಯ ನರಗುಂದ ಮತ್ತು ರೋಣ ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ. ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವುದರೊಂದಿಗೆ ನೆರೆ ಸಂತ್ರಸ್ತರಿಗೆ ತಕ್ಷಣಕ್ಕೆ ಪರಿಹಾರ ಒದಗಿಸುವ ಮೂಲಕ ಜನ ಮನಗೆದ್ದಿದ್ದರು. ಮೃದುಸ್ವಭಾವ, ಸಂಭಾವಿತ ಜಿಲ್ಲಾಧಿ ಕಾರಿ ಎಂದು ಅಧಿಕಾರಿ ವಲಯದಲ್ಲಿ ಪ್ರೀತಿ ಪಾತ್ರರಾಗಿದ್ದರು. ಗದಗ ಜಿಲ್ಲಾಧಿಕಾರಿಯಾಗಿ 2012ರ ಕರ್ನಾಟಕ ಐಎಎಸ್‌ ಕೇಡರ್‌ನ ಸುಂದರೇಶ್‌ ಬಾಬು ಅವರು ವರ್ಗಾವಣೆಗೊಂಡಿದ್ದು, ಈ ಮೊದಲು ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next