ರಾಯಚೂರು: ಕಳೆದೆರಡು ವರ್ಷಗಳಿಂದ ಜಿಲ್ಲೆಯಲ್ಲಿ ಎದುರಾಗಿದ್ದ ಪ್ರವಾಹ ಹಿನ್ನೆಲೆಯಲ್ಲಿ ಪ್ರಸಕ್ತ ಮಳೆಗಾಲದಲ್ಲಿಯೂ ಪ್ರವಾಹ ಏರ್ಪಟ್ಟರೆ, ಜನ ಹಾಗೂ ಜಾನುವಾರುಗಳನ್ನು ರಕ್ಷಿಸಲು ಸಂಬಂ ಧಿಸಿದ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಈಗಿನಿಂದಲೇ ಸನ್ನದ್ದರಾಗಬೇಕು ಎಂದು ಜಿಲ್ಲಾಧಿ ಕಾರಿ ಆರ್.ವೆಂಕಟೇಶ ಕುಮಾರ ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿ ಕಾರಿ ಕಚೇರಿಯಲ್ಲಿ ಸೋಮವಾರ ಮಳೆಗಾಲ ಪ್ರವಾಹ ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳ ಕುರಿತು ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಹವಾಮಾನ ಇಲಾಖೆ ಈ ಬಾರಿ ನೀಡಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಅಗತ್ಯ ಮಳೆಯಾಗಲಿದೆ. ಅಲ್ಲದೆ ಪ್ರವಾಹ ಬರುವ ಸಾಧ್ಯತೆಗಳು ಇವೆ. ಜಿಲ್ಲೆಯಲ್ಲಿ ಹರಿಯುವ ಎರಡು ನದಿ ಪಾತ್ರದ ಪ್ರದೇಶಗಳಲ್ಲಿ ಸಂಭವನೀಯ ಮುಳುಗಡೆ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದರು. ತುಂಗಭದ್ರಾ ನದಿ ಪಾತ್ರದ 33 ಗ್ರಾಮಗಳು ಹಾಗೂ ಕೃಷ್ಣ ನದಿ ಪಾತ್ರದ 72 ಗ್ರಾಮಗಳಿಗೆ ನದಿಯ ನೀರು ನುಗ್ಗಲಿವೆ.
ಅಲ್ಲಿ ವಾಸ ಮಾಡುತ್ತಿರುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಂಬಂಧಿ ಸಿದ ಇಲಾಖೆಗಳ ಅ ಧಿಕಾರಿಗಳು ಹಾಗೂ ಸಿಬ್ಬಂದಿ ಸನ್ನದ್ದರಾಗಬೇಕು ಎಂದು ಹೇಳಿದರು. ತುಂಗಭದ್ರ ನದಿ ಪಾತ್ರದ 33 ಗ್ರಾಮಗಳಲ್ಲಿ 66,764 ಜನ ವಾಸ ಮಾಡುತ್ತಿದ್ದು ಹಾಗೂ ಕೃಷ್ಣ ನದಿ ಪಾತ್ರದ 72 ಗ್ರಾಮಗಳಲ್ಲಿ 82 ಸಾವಿರ ಜನ ವಾಸ ಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ಬಾ ಧಿತರಾಗುವ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದರು.
ರಾಯಚೂರು ಮತ್ತು ಲಿಂಗಸುಗೂರು ತಾಲೂಕುಗಳಲ್ಲಿ ಮಾತ್ರ ನಡುಗಡ್ಡೆ ಗ್ರಾಮಗಳಿದ್ದು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯಿಂದ ಪ್ರವಾಹ ಮುನ್ನೆಚ್ಚರಿಕೆಗಾಗಿ ನಡುಗಡ್ಡೆ ಗ್ರಾಮಗಳ ಜನ ಮತ್ತು ಜಾನುವಾರುಗಳು ಸಹಿತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಪ್ರಕೃತಿ ವಿಕೋಪದಿಂದ ಉಂಟಾಗುವ ಕೃಷಿ, ತೋಟಗಾರಿಕೆ ಬೆಳೆಗಳು, ಮಾನವ ಹಾಗೂ ಜಾನುವಾರು, ಮನೆ ಹಾನಿ ವರದಿಯನ್ನು ಪ್ರತಿ ತಾಲೂಕಿನಿಂದ ನಿಯೋಜಿತ ಅ ಧಿಕಾರಿಗಳು ಸಲ್ಲಿಸಬೇಕು. ಗ್ರಾಮಲೆಕ್ಕಾ ಧಿಕಾರಿ, ಪಿಡಿಒ, ಕಾರ್ಯದರ್ಶಿಗಳು ಕೇಂದ್ರ ಸ್ಥಾನದಲ್ಲೇ ಇದ್ದು ಅತಿವೃಷ್ಟಿ ಅಪಾಯಗಳ ಕುರಿತು ಜನರಿಗೆ ಎಚ್ಚರಿಕೆ ಸಂದೇಶ ನೀಡಬೇಕು ಎಂದು ಹೇಳಿದರು.
ಜಲಾಶಯಗಳಲ್ಲಿ ಶೇಖರಣೆಯಾದ ನೀರಿನ ಪ್ರಮಾಣ, ಒಳ ಹಾಗೂ ಹೊರ ಹರಿವಿನ ಮೇಲೆ ನಿಗಾವಹಿಸಬೇಕು. ಮುನ್ಸೂಚನೆ ಇಲ್ಲದೇ ಏಕಾಏಕಿ ಜಲಾಶಯಗಳಿಂದ ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸದಂತೆ ಅತ್ಯಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಪ್ರಕಾಶ ನಿಕ್ಕಂ, ಹೆಚ್ಚುವರಿ ಜಿಲ್ಲಾ ಧಿಕಾರಿ ಕೆ.ಆರ್ ದುರುಗೇಶ್, ಸಹಾಯಕ ಆಯುಕ್ತರಾದ ಸಂತೋಷ ಕಾಮಗೌಡ, ರಾಜಶೇಖರ ಡಂಬಳ, ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರು ಹಾಗೂ ಎನ್‌ಡಿಆರ್‌ಎಫ್ ತಂಡದ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆ ಅ ಧಿಕಾರಿಗಳು ಸಭೆಯಲ್ಲಿದ್ದರು.