ಹಾಸನ: ಎಲ್ಲಾ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ತಕ್ಷಣದಿಂದ ಸಾಧ್ಯ ವಿರುವ ಎಲ್ಲ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗಳನ್ನು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿ ಗಿರೀಶ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು ಸಂಕಷ್ಟದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಖಾಸಗಿ ಆಸ್ಪತ್ರೆಗಳು ತಮ್ಮ ಸೇವೆ ಪ್ರಾರಂಭಿಸಬೇಕು ಎಂದರು.
ಹಾಸನ ಜಿಲ್ಲಾ ಆಸ್ಪತ್ರೆ (ಹಿಮ್ಸ್ ಆಸ್ಪತ್ರೆ)ಯನ್ನು ಕೊರೊನಾ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ. ಹಾಗಾಗಿ ಖಾಸಗಿ ಅಸ್ಪತ್ರೆಗಳಲ್ಲಿ ಇತರ ವೈದ್ಯಕೀಯ ಸೇವೆ ಗಳು ದೊರೆಯುವಂತೆ ನೋಡಿಕೊಳ್ಳ ಬೇಕು. ಇದರಿಂದ ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ಸರ್ಕಾರದ ಆರೋಗ್ಯ ಸುರಕ್ಷಾ ಯೋಜನೆಯಡಿ ನೋಂದಣಿ ಮಾಡಿಕೊಂಡು ಬರುವ ಎಲ್ಲಾ ಅರ್ಹರಿಗೆ ಸರ್ಕಾರಿ ಆಸ್ಪತ್ರೆ ಶಿಫಾರಸಿಗೆ ಕಾಯದೇ ನಿಯ ಮಾನುಸಾರ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಗಿರೀಶ್ ನಿರ್ದೇಶನ ನೀಡಿದರು.
ಉಪ ವಿಭಾವಿಗಾಧಿಕಾರಿ ಡಾ.ನವೀನ್ ಭಟ್, ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳಾದ ಡಾ.ಬಷೀರ್, ಡಾ. ರಮೇಶ್, ಡಾ. ಪದ್ಮಪ್ರಸಾದ್, ಡಾ. ಅಶೋಕ್ ಕುಮಾರ್, ಡಾ.ದೇವಿ ಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೃಷ್ಣಮೂರ್ತಿ ಡಿಎಚ್‌ಒ ಡಾ.ಸತೀಶ್ ಕುಮಾರ್ ಮತ್ತಿತರರು ಹಾಜರಿದ್ದರು.