ಸಾವೀಗೀಡಾದ ಪ್ರಕರಣದಿಂದ ರಾಜ್ಯ ಸರ್ಕಾರ ಮತ್ತೆ ಎಚ್ಚೆತ್ತುಕೊಂಡಿದ್ದು, ರಾಜ್ಯದಲ್ಲಿ ನಿರುಪಯುಕ್ತ ಮತ್ತು ತೆರೆದ ಕೊಳವೆ ಬಾವಿಗಳನ್ನು ಪತ್ತೆ ಹಚ್ಚಿ, ಮುಚ್ಚುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಘಟಕದ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, 2014ರಲ್ಲಿ ದುರಂತ ನಡೆದಾಗಲೂ ಇದೇ ರೀತಿಯ ಸುತ್ತೋಲೆ ಹೊರಡಿಸಲಾಗಿತ್ತು.
Advertisement
ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಆದೇಶವನ್ನು ಸರಿಯಾಗಿ ಅನುಷ್ಠಾನಗೊಳಿಸಲಾಗಿಲ್ಲ. ಅಲ್ಲದೇ ತೆರೆದ ಹಾಗೂ ನಿರುಪಯುಕ್ತ ಕೊಳವೆ ಬಾವಿಗಳನ್ನು ಮುಚ್ಚುವ ವಿಷಯದಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಎಲ್ಲ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳ ಮೂಲಕ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇನ್ಮುಂದೆ ಕೊಳವೆ ಬಾವಿ ದುರಂತಗಳು ಸಂಭವಿಸಿದರೆ, ಸಂಬಂಧಿಸಿದಜಿಲ್ಲಾಧಿಕಾರಿಯೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.