Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾ ಧಿಕಾರದ ಸಭೆಯಲ್ಲಿ ಮಾತನಾಡಿದರು. ವಿಪತ್ತು ಸಂಭವಿಸದಂತೆ ಹಾಗೂ ವಿಪತ್ತು ಸಂಭವಿಸಿದಾಗ ಅದನ್ನು ಯಾವ ರೀತಿಯಾಗಿ ತಡೆಗಟ್ಟಬಹುದು ಮತ್ತು ಇದರ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಇಲಾಖೆಗಳು ಮೂಲ ಸೌಕರ್ಯಗಳ ವೃದ್ಧಿಗಾಗಿ ಕ್ರಿಯಾ ಯೋಜನೆ ರೂಪಿಸಿ ಎಂದರು.
Related Articles
Advertisement
ಗ್ರಾಮೀಣ ರಸ್ತೆ ಮತ್ತು ದುರಸ್ತಿಗಾಗಿ 18.44 ಲಕ್ಷ ರೂ., ಪ್ರಾಥಮಿಕ ಶಾಲೆಗಳ ದುರಸ್ತಿಗಾಗಿ 12.85 ಲಕ್ಷ ರೂ. ಹಾಗೂ ಅಂಗನವಾಡಿ ಕಟ್ಟಡಗಳ ದುರಸ್ತಿಗಾಗಿ 29.64 ಲಕ್ಷ ರೂ.ಅನುದಾನ ಹಂಚಿಕೆಯಾಗಿದ್ದು, ಮೂಲ ಸೌಕರ್ಯಗಳಿಗೆ ಸಂಬಂಧಿ ಸಿದಂತೆ ಕ್ರಿಯಾ ಯೋಜನೆ ತಯಾರಿಸಿ ವರದಿ ನೀಡಬೇಕು. ನಿಗ ದಿತ ಶುಲ್ಕ ಪಾವತಿಸಿ ತಮ್ಮ ಇಲಾಖೆ ಹಂತದಲ್ಲಿ ಫೈರ್ ಆಡಿಟ್ ಮಾಡಿಸಿಕೊಳ್ಳುವಂತೆ ಅ ಧಿಕಾರಿಗಳಿಗೆ ಸೂಚಿಸಿದರು.
ನೀರಿನ ಸಮಸ್ಯೆಯಾಗದಂತೆ ಕ್ರಮ: ಬೇಸಿಗೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತವೆ ಎನ್ನುವುದನ್ನು ಸಮೀಕ್ಷೆ ಮಾಡಿ, ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪರ್ಯಾಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಟಾಸ್ಕ್ಫೋರ್ಸ್ ಸಮಿತಿಯಲ್ಲಿ ಪಾಸ್ ಆದಾಗ ನೀರು ಸರಬರಾಜಿಗೆ ಕ್ರಮವಹಿಸಬೇಕು. ಬೇಸಿಗೆ ಸಂದರ್ಭದಲ್ಲಿ ನೀರು ಸರಬರಾಜು ಮಾಡಿ ನಂತರ ಬಿಲ್ ಪಾವತಿಗೆ ಸಮಸ್ಯೆ ಆಗಬಾರದು ಎಂದು ಸೂಚನೆ ನೀಡಿದರು.
ಮೇವಿನ ಸಮಸ್ಯೆ ಇಲ್ಲ: ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಜಾನುವಾರಿಗಳಿಗೆ ಯಾವುದೇ ಮೇವಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ| ಕೃಷ್ಣಪ್ಪ ಸಭೆಗೆ ಮಾಹಿತಿ ನೀಡಿದರು. ಮುಂಬರುವ ಮೇ ಹಾಗೂ ಜೂನ್ ತಿಂಗಳವರೆಗೂ ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಮೇವಿನ ಸಮಸ್ಯೆ ಆಗುವುದಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಅಪರ ಜಿಲ್ಲಾ ಧಿಕಾರಿ ಈ.ಬಾಲಕೃಷ್ಣ, ಉಪವಿಭಾಗಾ ಧಿಕಾರಿ ಪ್ರಸನ್ನ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಫಾಲಾಕ್ಷ, ನಗರಾಭಿವೃದ್ಧಿ ಕೋಶದ ಯೋಜನಾ ಧಿಕಾರಿ ಸತೀಶ್‌ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅ ಧಿಕಾರಿಗಳು ಭಾಗವಹಿಸಿದ್ದರು.