Advertisement

ಪ್ರತ್ಯೇಕ ಪಾರ್ಕಿಂಗ್‌ಗೆ ಸ್ಥಳ ಗುರುತಿಸಿ: ಡಿಸಿ

08:03 PM Mar 26, 2021 | Team Udayavani |

ಚಿತ್ರದುರ್ಗ: ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಪಾರ್ಕಿಂಗ್‌ ಸಮಸ್ಯೆಯಿಂದಲೂ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ಪ್ರತ್ಯೇಕ ಪಾರ್ಕಿಂಗ್‌ ಸ್ಥಳಗಳನ್ನು ಗುರುತಿಸಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಮತ್ತು ಪಟ್ಟಣಗಳಲ್ಲಿ ಪ್ರತ್ಯೇಕ ಪಾರ್ಕಿಂಗ್‌ ಸ್ಥಳ ನಿಗದಿ  ಮಾಡಬೇಕು. ಪ್ರಮುಖ ಸ್ಥಳಗಳಲ್ಲಿ ಆಟೋ ರಿಕ್ಷಾ ನಿಲ್ದಾಣ ಮಾಡಿ ಅಪಘಾತ ಸಂಭವಿಸದಂತೆ ಜಾಗರೂಕತೆ ವಹಿಸಬೇಕು ಎಂದು ಅಧಿ ಕಾರಿಗಳಿಗೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ರಾಜ್ಯ ಸಮಿತಿ ನಿರ್ದೇಶನದಂತೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ. ಅಪಘಾತಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗಬೇಕು ಎಂದು ಅಧಿ ಕಾರಿಗಳಿಗೆ ತಾಕೀತು ಮಾಡಿದರು. ಜಿಲ್ಲೆಯಲ್ಲಿ 36 ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಇಂತಹ ಸ್ಥಳಗಳಲ್ಲಿ ರಸ್ತೆ ಸಂಚಾರ ನಿಯಮ, ಸೂಚನೆ ಅಳವಡಿಸಲಾಗಿದೆ.

ರಸ್ತೆ ಪುನರ್‌ ನಿರ್ಮಾಣ ಮಾಡುವಾಗ ಅಗತ್ಯವಿರುವ ರಸ್ತೆ ಸುರಕ್ಷತಾ ಮಾರ್ಗಸೂಚಿ ತಕ್ಷಣ ಕಾಣುವಂತೆ ಅಳವಡಿಸಿರಬೇಕು. ಹೆದ್ದಾರಿ ನಿರ್ಮಾಣ ಮಾಡುವಾಗ ಇಂತಹ ತಪ್ಪುಗಳಿಂದ ರಾತ್ರಿ ವೇಳೆಯಲ್ಲಿ ಅಪಘಾತಗಳು ನಡೆದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರದ ಅ ಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ, ಸುರಕ್ಷತಾ ಕ್ರಮ ಕೈಗೊಳ್ಳದ ಜಾಗಗಳಲ್ಲಿ ಸೂಕ್ತ ಎಚ್ಚರಿಕೆ ವಹಿಸಿ ಎಂದು ಸೂಚಿಸಿದರು. ಜಿಲ್ಲೆಯ ಬಿ.ಜಿ.ಕೆರೆ, ಆದಿವಾಲ, ಜೆ.ಜಿ.ಹಳ್ಳಿ, ಕೆಳಗಳಹಟ್ಟಿ ಸ್ಥಳಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾ  ಧಿಕಾರದವರು ಈ ಸ್ಥಳಗಳಲ್ಲಿ ಸಂಚಾರ ನಿಯಮ ಅಳವಡಿಸಬೇಕು ಎಂದು ಹೇಳಿದರು.

ರೈಲ್ವೆ ಅಂಡರ್‌ಪಾಸ್‌ ಸಮಸ್ಯೆ ಸರಿಪಡಿಸಿ:

ತುರುವನೂರು ರಸ್ತೆಯಲ್ಲಿರುವ ರೈಲ್ವೆ ಅಂಡರ್‌ ಪಾಸ್‌ನಲ್ಲಿ ಸ್ವಲ್ಪ ಮಳೆಯಾದರೂ ಸಾಕಷ್ಟು ನೀರು ನಿಂತು ರಸ್ತೆ ಸಂಪರ್ಕ ಕಡಿತವಾಗುತ್ತದೆ. ಇದು ಪ್ರತಿ ಸಲ ಮಳೆ ಬಂದಾಗಲೂ ಸಮಸ್ಯೆ ಸೃಷ್ಟಿಸುತ್ತಿದೆ. ಸಂಚಾರಕ್ಕೆ ತೊಂದರೆಯಾಗಿ ಜನ ಪರದಾಡಬೇಕಾಗುತ್ತದೆ. ಆದ್ದರಿಂದ ಅಧಿ  ಕಾರಿಗಳು ಅಗತ್ಯ ಕ್ರಮ ಕೈಗೊಂಡು ಸರಿಪಡಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

Advertisement

ಗ್ರಾಮೀಣ ಪ್ರದೇಶಗಳಲ್ಲಿ ಲೈಸನ್ಸ್‌ ಇಲ್ಲದ ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಇಂತಹ ವಾಹನಗಳು ಅಪಘಾತವಾದ ಸಂದರ್ಭದಲ್ಲಿ ಪ್ರಕರಣ ದಾಖಲು ಮಾಡುವ ಸಂದರ್ಭಗಳಲ್ಲಿ ತೊಂದರೆ ಎದುರಾಗುತ್ತಿದೆ. ಹಾಗಾಗಿ ಆರ್‌ ಟಿಒ ಅ ಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ, ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರದ ವ್ಯವಸ್ಥಾಪಕ ರವಿತೇಜ್‌, ಡಿವೈಎಸ್ಪಿಗಳಾದ ಪಾಂಡುರಂಗ, ರೋಷನ್‌ ಜಮೀರ್‌, ಪೌರಾಯುಕ್ತ ಹನುಮಂತರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next