ದೇವನಹಳ್ಳಿ: ಜಾನುವಾರುಗಳನ್ನು ಸಾಗಣೆ ಮಾಡುವಂತಿಲ್ಲ. ಒಂದು ವೇಳೆ ಜಿಲ್ಲೆಯಲ್ಲಿ ಅಂತಹ ಪ್ರಕರಣ ಗಳು ಕಂಡುಬಂದಲ್ಲಿ ಕಾರ್ಯಾಚರಣೆ ಮೂಲಕ ವಶಪಡಿಸಿಕೊಳ್ಳಲಾಗುವ ಜಾನುವಾರುಗಳನ್ನು ಹತ್ತಿ ರದ ಗೋಶಾಲೆಗಳಿಗೆ ಬಿಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಶುಸಂಗೋಪನಾ ಇಲಾಖೆ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದಿಂದ ನಡೆದ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಆದ್ಯಾದೇಶ 2020ರ ಕಾಯ್ದೆ ಅನುಷ್ಠಾನಗೊಳಿಸುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವರದಿ ಸಲ್ಲಿಸಿ ಅನುದಾನಕ್ಕೆ ಮನವಿ: ಜಿಲ್ಲೆಯಲ್ಲಿರುವ ಗೋಶಾಲೆ ಮುಖ್ಯಸ್ಥರು ಜಾನುವಾರುಗಳನ್ನು ತಮ್ಮ ಗೋಶಾಲೆಗಳಿಗೆ ಪಡೆದು ಅವುಗಳ ಪೋಷಣೆ ಮಾಡಬೇಕು. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ ಗೋಶಾಲೆಗಳಿಗೆ ಹಣಕಾಸಿನ ನೆರವು ನೀಡಲು ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಗುವುದು ಎಂದರು.
ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ಜಿ.ಎಂ.ನಾಗರಾಜು ಮಾತನಾಡಿ, ಮೊದಲ ಬಾರಿಗೆ ಅಕ್ರಮವಾಗಿ ಜಾನುವಾರು ಸಾಗಣೆ ಮಾಡಿ ದರೆ ಕನಿಷ್ಠ 3 ವರ್ಷ, ಗರಿಷ್ಠ 7 ವರ್ಷ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರದಿಂದ 5 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ. ಎಸ್‌ಐ ದರ್ಜೆಯ ಸಕ್ಷಮ ಅಧಿಕಾರಿಗಳು ದಂಡ ವಿಧಿಸಿ ಜಾನುವಾರುಗಳನ್ನು ಹತ್ತಿರದ ಗೋಶಾಲೆಗಳಿಗೆ ಬಿಡಬೇಕು ಎಂದರು.
ಹಣ್ಣಿನ ಗಿಡ ನೆಡಿ: ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಡಾ. ವಿ.ಜೀವನ್ ಕುಮಾರ್ ಮಾತನಾಡಿ, ಜಿÇÉೆಯಲ್ಲಿ ನವಿಲುಗಳ ಹತ್ಯೆ ಹೆಚ್ಚಾಗಿ ನಡೆಯುತ್ತಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಘಾಟಿ ಅರಣ್ಯ ವಲಯ ದಲ್ಲಿ ಪ್ರಾಣಿ ಪಕ್ಷಿಗಳಿಗೆ ಸೂಕ್ತ ಆಹಾರ ಸಿಗುತ್ತಿಲ್ಲ. ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ನೆಡಬೇಕು ಎಂದು ಹೇಳಿದರು.
ಇದನ್ನೂ ಓದಿ :ಅರ್ಚಕರ ಗಲಾಟೆ: ಅಧಿಕಾರಿಗಳು ಮೌನ
ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕಿ ಸುಮಾ, ಪಶುಸಂಗೋಪನಾ ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಅನಿಲ್ ಕುಮಾರ್.ಸಿ.ಎಸ್., ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ಹನು ಮಂ ತಪ್ಪ, ನೆಲಮಂಗಲದ ಪ್ರಾದೇಶಿಕ ಸಾರಿಗೆ ಅಧಿಕಾರಿ ಗುರುಮೂರ್ತಿ, ನೆಲಮಂಗಲ ನಗರಸಭೆ ಪೌರಾ ಯುಕ್ತ ಮಂಜುನಾಥಸ್ವಾಮಿ, ದೊಡ್ಡಬಳ್ಳಾಪುರ ನಗರ ಸಭೆ ಪೌರಾಯುಕ್ತ ಪ್ರದೀಪ, ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿ ನಾಗರಾಜು, ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಪ್ರದೀಪ್ ಕುಮಾರ್, ತಾಲೂಕು ಪಶು ಪಾಲನಾಧಿಕಾರಿಗಳು, ವಿಶ್ವನಾಥಪುರ ಪೊಲೀಸ್ ಠಾಣೆ ಎಎಸ್‌ಐ ರಾಮಕೃಷ್ಣಯ್ಯ ಹಾಗೂ ವಿವಿಧ ಗೋಶಾಲೆಗಳ ಮುಖ್ಯಸ್ಥರು ಇದ್ದರು.