ವಿಜಯಪುರ: ಚುನಾವಣಾ ಆಯೋಗವು ಕರ್ನಾಟಕದ ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಮತಕ್ಷೇತ್ರದ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ| ವಿಜಯಮಹಾಂತೇಶ ದಾನಮ್ಮನವರ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆಯಲ್ಲಿ ಈ ಮಾಹಿತಿ ನೀಡಿದರು.
ಈ ಚುನಾವಣೆಯಲ್ಲಿ ಮತದಾನವು ಬೆಳಗ್ಗೆ 8 ಗಂಟೆಗೆ ಆರಂಭವಾಗಿ ಸಂಜೆ 4 ಗಂಟೆವರೆಗೆ ನಡೆಯಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಎಲ್ಲಾ ತಾಲೂಕು ಕಚೇರಿಗಳಲ್ಲಿ 24ಗಿ7 ಕಂಟ್ರೋಲ್ ರೂಮು ಸ್ಥಾಪಿಸಲಾಗುವುದು. ಚುನಾವಣೆಗೆ ಸಂಬಂಧಿಸಿದಂತೆ ಏನೇ ದೂರುಗಳು ಇದ್ದರೆ ಅಲ್ಲಿಗೆ ಕಳುಹಿಸಬೇಕು. ಇಲ್ಲವೇ ತಮಗೆ ಖುದ್ದು ಭೇಟಿಯಾಗಿ ತಿಳಿಸಬಹುದು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
ಕೋವಿಡ್ -19 ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಜಾಗ್ರತೆ ವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಸಭೆ-ಸಮಾರಂಭಗಳನ್ನು ಆಯೋಜನೆ ಮಾಡುವ ಸಂದರ್ಭದಲ್ಲಿ ಕೋವಿಡ್ 19ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚಿಸಿದರು.
Related Articles
ಮತದಾನದ ಅವಧಿಯನ್ನು ಹೆಚ್ಚಿಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಬಿಜೆಪಿ ವಿಜಯ, ಕಾಂಗ್ರೆಸ್ ಪಕ್ಷದ ಇರ್ಫಾನ್ ಶೇಖ, ಜೆಡಿಎಸ್ ಪಕ್ಷದ ರಾಜು ಹಿಪ್ಪರಗಿ ಇದ್ದರು.