Advertisement
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾಮಟ್ಟದ ತ್ತೈಮಾಸಿಕ, ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿ ಶಾಲೆಗಳ ನೂರು ಗಜಗಳವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ಬಗ್ಗೆ ಆಯಾ ಶಾಲಾ ಶಿಕ್ಷಕರಿಂದ ಛಾಯಾಚಿತ್ರ ಸಹಿತ ಪರಿಶೀಲನಾವರದಿ ಪಡೆದು ಈ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
Related Articles
Advertisement
ಅದರಂತೆ ಸೆಕ್ಷನ್ 5ರನ್ವಯ ಸಿಗರೇಟ್‌ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ನಿಯಮದ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ, 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಎರಡನೇ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ, ಸೆಕ್ಷನ್ 6ರನ್ವಯ 18ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ನಿಷಿದ್ಧ. ಶಾಲಾ ಕಾಲೇಜುಗಳ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರುವುದರ ನಿಷೇಧ 200 ರೂ.ರವರೆಗೆ ದಂಡ ವಿಧಿಸುವ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಸೆಕ್ಷನ್-7ರಿಂದ 9ರವರೆಗೆ ಸಿಗರೇಟ್‌ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯದ ಎಚ್ಚರಿಕೆ ಸಂದೇಶ ನೀಡದ, ಮಾರುವುದೂ ನಿಷೇಧವಿದೆ.
ತಂಬಾಕು ಉತ್ಪನ್ನ ಉತ್ಪಾದಕರಿಗೆ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಲಾಗುವುದು. ಎರಡನೇ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ 10 ಸಾವಿರ ರೂ. ದಂಡ ವಿಧಿಸುವ ಕುರಿತು ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಸೂಚಿಸಿದರು.
ಮಾರಾಟ, ಚಿಲ್ಲರೆ ವ್ಯಾಪಾರಕ್ಕಾಗಿ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ 1000 ರೂ. ದಂಡ ಹಾಗೂ ಎರಡನೇ ಉಲ್ಲಂಘನೆಗಾಗಿ 5 ವರ್ಷ ಜೈಲು ಶಿಕ್ಷೆ ಹಾಗೂ 3000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಡಿಎಚ್‌ಒ ಡಾ| ಮಹೇಂದ್ರ ಕಾಪ್ಸೆ, ಸರ್ಕಾರಿ ಜಿಲ್ಲಾಸ್ಪತ್ರೆಯ ಡಾ| ಶರಣಪ್ಪ ಕಟ್ಟಿ, ಡಿಡಿಪಿಐ ಪ್ರಸನ್ನಕುಮಾರ, ತಂಬಾಕು ನಿಷೇಧ ಘಟಕದ ಅಧಿಕಾರಿ ಡಾ| ಮಲ್ಲನಗೌಡ ಬಿರಾದಾರ ಇದ್ದರು.