ಚಾಮರಾಜನಗರ: ಕೋವಿಡ್ ಸೋಂಕು ವ್ಯಾಪಿಸದಂತೆ ತಡೆಯಲು ಕೋವಿಡ್ ಪರೀಕ್ಷೆ ಹೆಚ್ಚಳ ಮಾಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಪರೀಕ್ಷಾ ಸಂಖ್ಯೆಯ ಗುರಿಯನ್ನು ಪರಿ ಷ್ಕೃತಗೊಳಸಲಾಗಿದೆ. ಆ ಪ್ರಕಾರ ಪ್ರತಿನಿತ್ಯ ಕೋವಿಡ್ ಪರೀಕ್ಷೆಯನ್ನು ವ್ಯಾಪಕವಾಗಿ ಜಿಲ್ಲಾದ್ಯಂತ ನಡೆಸಬೇಕು ಎಂದರು.
ನಗರ, ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿರುವ ಜನ ನಿಬಿಡ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಕೈಗೊಳ್ಳಬೇಕು. ಮಾರುಕಟ್ಟೆ, ಬಸ್ ನಿಲ್ದಾಣ ಇನ್ನಿತರ ವ್ಯಾಪಾರ ಸ್ಥಳಗಳಲ್ಲಿಕೋವಿಡ್ ಪರೀಕ್ಷೆಗೆ ಕ್ರಮ ವಹಿಸಬೇಕು. ಎಲ್ಲಾ ತಾಲೂಕು ಗಳಲ್ಲಿಯೂ ಸಂಚಾರಿ ವಾಹನಗಳ ಮೂಲಕವು ಕೋವಿಡ್ ಪರೀಕ್ಷೆಗೆ ಕೂಡಲೇ ಚಾಲನೆ ನೀಡಬೇಕು ಎಂದರು.
ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳು ಕೋವಿಡ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರತಿದಿನ ಕೈಗೊಳ್ಳಲಾಗುತ್ತಿ ರುವ ಪರೀಕ್ಷಾ ಕುರಿತ ಪ್ರಗತಿಯನ್ನು ಪರಿಶೀಲಿಸಬೇಕು. ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಮೂಲೆಹೊಳೆ, ಕೆಕ್ಕನಹಳ್ಳ ಸೇರಿದಂತೆ ಇರುವ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಬೇಕು. ಮುಂಬರುವ ದಿನ ಗಳಲ್ಲಿ ಕೋವಿಡ್ ಉಲ್ಬಣಿಸುವ ಸಂದರ್ಭ ಸಂಭವಿಸಿದ್ದಲ್ಲಿ ಅದಕ್ಕಾಗಿ ಸಮರ್ಥವಾಗಿ ಎಲ್ಲಾ ಸಿದ್ಧತೆಗಳನ್ನು ಈಗಿನಿಂದಲೇಕೈಗೊಂಡಿರಬೇಕು ಎಂದರು.
ಎಸ್ಪಿ ದಿವ್ಯಾ ಸಾರಾ ಥಾಮಸ್, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಹೆಚ್ಚುವರಿ ಡೀಸಿ ಕಾತ್ಯಾಯಿನಿದೇವಿ, ಹೆಚ್ಚುವರಿ ಎಸ್ಪಿ ಸುಂದರ್ ಇದ್ದರು.