ಹಾಸನ: ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂ.18ರಂದು ನಡೆಯಲಿದ್ದು, ಅದಕ್ಕೂ ಮುನ್ನ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಥಳೀಯ ಆಡಳಿತದ ನೆರವಿ ನಿಂದ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿಸ ಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪರೀಕ್ಷೆಯ ಪೂರ್ವಸಿದತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆ ಗೊಂದವಿಲ್ಲದೇ ನಡೆಯಬೇಕು. ಕೋವಿಡ್ 19 ನಿಯಂತ್ರಣಾ ಕ್ರಮಗಳ ಬಗ್ಗೆ ಮುಂಜಾಗ್ರತೆ ವಹಿಸಿ ಸಾಮಾಜಿಕ ಅಂತರ ಕಾಯ್ದು ಕೊಂಡು ಪರೀಕ್ಷೆ ನಡೆಸಬೇಕು ಎಂದರು. ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆಯಾಗಬಾರದು.
ಹಾಗಾಗಿ ಆ ದಿನ ಸಾರ್ವಜನಿಕ ಬಸ್ ಸಂಚಾರ ಸಂಪೂರ್ಣವಾಗಿರಲಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳು ವುದರ ಜೊತೆಗೆ, ಶೀತ, ಜ್ವರ ಹಾಗೂ ಇತರೆ ರೊಗಲಕ್ಷಣಗಳಿದ್ದರೆ, ಅಂತಹ ವಿದ್ಯಾರ್ಥಿ ಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಆರೋಗ್ಯ ಸಿಬ್ಬಂದಿಯನ್ನು ನೇಮಿಸಬೇಕು ಎಂದರು.
ಜಿಲ್ಲೆಯಲ್ಲಿ ಒಟ್ಟು 30 ಪರೀಕ್ಷಾ ಕೇಂದ್ರ ಗಳಿದ್ದು, ಹೆಚ್ಚುವರಿಯಾಗಿ 15 ಬ್ಲಾಕ್ ಗಳನ್ನು ಸಿದಟಛಿಪಡಿಸಿಕೊಳ್ಳಲಾಗಿದೆ. ಹಾಗಾಗಿ ಪರೀಕ್ಷಾ ಸಂದರ್ಭದಲ್ಲಿ ಸಾಮಾಜಿಕ ಅಂತರಕ್ಕೆ ಯಾವುದೇ ರೀತಿಯ ಅಡಚಣೆ ಇರುವುದಿಲ್ಲ. ಜೊತೆಗೆ ವಿದ್ಯಾರ್ಥಿಯಲ್ಲಿ ರೋಗಲಕ್ಷಣ ಕಂಡುಬಂದಲ್ಲಿ ಅಂತಹ ವರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಿ ಸ್ಥಳೀಯ ವೈದ್ಯಾಧಿಕಾರಿಗೆ ಮಾಹಿತಿ ನೀಡಲಾಗುವುದು ಎಂದು ಡಿಡಿಪಿಯು ಜಯಣ್ಣ ಅವರು ತಿಳಿಸಿದರು. ಎ.ಎಸ್ಪಿ ಬಿ.ಎನ್ ನಂದಿನಿ, ಡಿಎಚ್‌ಒ ಡಾ.ಸತೀಶ್ ಕುಮಾರ್ ಮತ್ತಿತರರು ಹಾಜರಿದ್ದರು.