Advertisement

ಗ್ರಾಪಂ ಚುನಾವಣೆ ಸಿದ್ಧತೆಗೆ ಡಿಸಿ ಸೂಚನೆ

03:59 PM Dec 02, 2020 | Suhan S |

ಬೀದರ: ಗ್ರಾಪಂ ಸಾರ್ವತ್ರಿಕ ಚುನಾವಣೆಗೆ ಸಂಬಂಧಪಟ್ಟಂತೆ ತುರ್ತಾಗಿ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾ ಧಿಕಾರಿ ರಾಮಚಂದ್ರನ್‌ ಆರ್‌. ಜಿಲ್ಲಾ ಮತ್ತು ತಾಲೂಕು ಮಟ್ಟದ ಅ ಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಡಿಸಿ ಕಚೇರಿಯಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಯಾವುದೇ ದೂರುಗಳು ಬರದಂತೆ ಚುನಾವಣೆ ಕಾನೂನು ಬದ್ಧವಾಗಿ ನಡೆಸಬೇಕು. ಅಧಿ ಕಾರಿಗಳಿಗೆ ಕಾರ್ಯ ಹಂಚಿಕೆ ಕಾರ್ಯ ತುರ್ತಾಗಿ ನಡೆಯಬೇಕು. ರಾಜ್ಯ ಚುನಾವಣಾ ಆಯೋಗ ಹೊರಡಿಸಿದ ನಿಯಮಾನುಸಾರಚುನಾವಣೆಯು ಮುಕ್ತ, ನ್ಯಾಯಸಮ್ಮತ, ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕಿದೆ ಎಂದರು.

ಚುನಾವಣೆಗೆ ಸಂಬಂಧಪಟ್ಟಂತೆ ವಿವಿಧ ಸಮಿತಿಗಳ ರಚನೆ ಮತ್ತು ನೋಡಲ್‌ ಅಧಿಕಾರಿಗಳ ನೇಮಕ ಕಾರ್ಯ ತುರ್ತಾಗಿ ನಡೆಯಬೇಕು. ಚುನಾವಣೆ ಸಂಪೂರ್ಣ ಮೇಲುಸ್ತುವಾರಿ ಸಮರ್ಪಕವಾಗಿ ನೋಡಿಕೊಳ್ಳುವುದು ಮತ್ತು ಇದಕ್ಕೆ ಸಕಾಲಕ್ಕೆ ಸಹಕರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಬೇಕು ಎಂದರು.

ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಡಿ.4ರಂದು ತರಬೇತಿಗೆ ಮತ್ತು ಪೋಲಿಂಗ್‌ ಆಫಿಸರ್‌ಗಳಿಗೂ ಮಾಸ್ಟರ್‌ ಟ್ರೇನರ್‌ ತರಬೇತಿ ಈಗ ಒಂದು ಹಂತದಲ್ಲಿ ನೀಡಲು ಕೂಡಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಬೇರೆಡೆ ವರ್ಗಾವಣೆಯಾದ ಮತ್ತು ಅನಾರೋಗ್ಯ ಹಿನ್ನೆಲೆಯಲ್ಲಿ ಕೆಲವೊಂದು ಚುನಾವಣಾಧಿಕಾರಿ/ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ, ತಾಲೂಕು ಮಟ್ಟದ ನೋಡೆಲ್‌ ಅಧಿಕಾರಿಗಳ ಬದಲಾವಣೆ ಪ್ರಕ್ರಿಯೆ ಕೂಡಲೇ ನಡೆಸಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಮಾತನಾಡಿ, ಚುನಾವಣೆ ಪ್ರಚಾರ ಮತ್ತು ಚುನಾವಣೆಗೆ ಸಂಬಂ ಧಿಸಿದ ಇತರ ಕಾರ್ಯಕ್ರಮ ಅನುಮತಿ ಪಡೆಯದೇ ನಡೆಸಬಾರದು. ಇದಕ್ಕೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿ ವಿವರವಾಗಿ ತಿಳಿಸಲಾಗುವುದು ಎಂದು ಹೇಳಿದರು. ಹೆಚ್ಚುವರಿ ಎಸ್‌ಪಿ ಡಾ| ಗೋಪಾಲ ಬ್ಯಾಕೋಡ್‌ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಭದ್ರತಾ ವ್ಯವಸ್ಥೆ ಮೇಲ್ವಿಚಾರಣೆ ನಡೆಸಲು ಎಲ್ಲ ಪೊಲೀಸ್‌ ಅ ಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಬೇಕು ಎಂದರು.

Advertisement

ಈ ವೇಳೆ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಭುವನೇಶ ಪಾಟೀಲ, ತಹಶೀಲ್ದಾರ್‌ ಗಂಗಾದೇವಿ ಸಿ.ಎಚ್‌., ಪೌರಾಯುಕ್ತರು, ಬೀದರ, ಭಾಲ್ಕಿ ಹಾಗೂ ಹುಮನಾಬಾದ ಪೊಲೀಸ್‌ ಉಪಾ ಧೀಕ್ಷಕರು, ಚುನಾವಣಾ ಮಾಸ್ಟರ್‌ ಟ್ರೇನರ್‌ ಗೌತಮ ಅರಳಿ ಇತರರು ಇದ್ದರು.

ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಗ್ರಾಪಂಗಳ ಚುನಾವಣೆ ನಡೆಯಲಿದೆ. ಮೊದಲನೇ ಹಂತದಲ್ಲಿಬಸವಕಲ್ಯಾಣ ಉಪ ವಿಭಾಗದ ಬಸವಕಲ್ಯಾಣ, ಹುಲಸೂರು, ಹುಮನಾಬಾದ, ಚಿಟಗುಪ್ಪ, ಭಾಲ್ಕಿ ಮತ್ತು ಎರಡನೇ ಹಂತದಲ್ಲಿ ಬೀದರ ಉಪ ವಿಭಾಗದ ಬೀದರ, ಔರಾದ ಮತ್ತುಕಮಲನಗರಗಳಲ್ಲಿ ನಡೆಯಲಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಿ ಚುನಾವಣೆ ನಡೆಸಬೇಕಿದೆ.  –ರಾಮಚಂದ್ರನ್‌ ಆರ್‌., ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next