Advertisement

ಅನುದಾನ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

11:22 AM Feb 27, 2021 | Team Udayavani |

ದೇವನಹಳ್ಳಿ: ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯ ನೀಡುವಂತಹ, ಪ್ರತಿಯೊಂದು ಇಲಾಖೆಗಳಲ್ಲಿ ಉಳಿದಿರುವ ಅನುದಾನವನ್ನು ಮಾರ್ಚ್‌ ಮೊದಲ ವಾರ ದೊಳಗೆ ಬಳಕೆ ಮಾಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದರು.

Advertisement

ತಾಲೂಕಿನ ಜಿಲ್ಲಾಡಳಿತ ಭವನದ ಡೀಸಿ ಕಚೇರಿ ಸಭಾಂಗಣದಲ್ಲಿ ನಡೆದ ಪ.ಜಾತಿ ಮತ್ತು ಪ.ಪಂಗಡಗಳ ಉಪಯೋಜನೆಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಗಳಲ್ಲಿ ಉಳಿದಿರುವ ಅನುದಾನವನ್ನು ಸೂಕ್ತ ಸಮಯದಲ್ಲಿ ಬಳಕೆ ಮಾಡಬೇಕು. ಲಭ್ಯವಿರುವ ಸವಲತ್ತು ಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ವಾಗಬೇಕು. ಕೃಷಿ ಇಲಾಖೆಗೆ 300.76 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, 241.80 ಲಕ್ಷ ರೂ. ಬಳಕೆಯಾಗಿದೆ ಎಂದರು.

ತೋಟಗಾರಿಕೆ ಇಲಾಖೆಗೆ 283.06 ಲಕ್ಷ ರೂ.ಬಿಡುಗಡೆಯಾಗಿರುವ ಮೊತ್ತದಲ್ಲಿ 159.41 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಹಾಸ್ಟೆಲ್‌ ನಿರ್ವಹಣೆಗಾಗಿ ಬಿಡುಗಡೆಯಾಗಿರುವ ಹಣ ಬಳಕೆಯಾಗಬೇಕು. ಪೌರ ಕಾರ್ಮಿಕರಿಗೆ ಮೂಲ ಸೌಕರ್ಯ ಒದಗಿಸುವ ಜೊತೆಯಲ್ಲಿ ಅವರಿಗೆ ಅವಶ್ಯವಿರುವ ಸಮವಸ್ತ್ರಗಳನ್ನು ನೀಡಬೇಕು ಎಂದರು. ಹೊಸಕೋಟೆ ನಗರಸಭೆಯಲ್ಲಿ, 75 ಲಕ್ಷ ರೂ. ಹಣ ಬಾಕಿ ಉಳಿದಿದ್ದು, ಮಾರ್ಚ್‌ ಮೊದಲ ವಾರದೊಳಗಡೆ ಹಣ ಬಳಕೆ ಮಾಡಬೇಕು. ಪುರಸಭೆಯಲ್ಲಿ 18 ಲಕ್ಷ ರೂ., ವಿಜಯಪುರ ಪುರಸಭೆಯಲ್ಲಿ 3 ಲಕ್ಷ ಹಣ ಬಳಕೆಯಾಗದೆ ಬಾಕಿ ಉಳಿದಿದೆ. ಯಾವುದೇ ಅನುದಾನ ಬಳಕೆಯಾಗದೆ ಉಳಿಯಬಾರದು. ಈ ನಿಟ್ಟಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌. ಕೆ.ನಾಯಕ್‌, ಜಿಪಂ ಮುಖ್ಯ ಯೋಜನಾ ಅಧಿಕಾರಿ ವಿನುತಾರಾಣಿ, ನಗರಾಭಿವೃದ್ಧಿ ಪ್ರಾಧಿಕಾರ ಕೋಶದ ಯೋಜನಾ ನಿರ್ದೇಶಕಿ ಸುಮಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next