ಕಲಬುರಗಿ: ಪ್ರಸಕ್ತ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯು ಮಾ.1ರಿಂದ 17ರ ವರಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ರೂಟ್ ಅಧಿಕಾರಿಗಳು ಮತ್ತು ಪರೀಕ್ಷಾ ಕೇಂದ್ರದ ಮುಖ್ಯ ಮೇಲ್ವಿಚಾರಕರ ಸಭೆಯಲ್ಲಿ ಮಾತನಾಡಿ, ಜಿಲ್ಲಾದ್ಯಂತ 18 ಸರ್ಕಾರಿ ಕಾಲೇಜು, 12 ಅನುದಾನಿತ ಮತ್ತು 17 ಅನುದಾನ ರಹಿತ ಕಾಲೇಜುಗಳು ಸೇರಿದಂತೆ ಒಟ್ಟು 47 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 30,329 ಅಭ್ಯರ್ಥಿಗಳು
ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ 6 ಪರೀಕ್ಷಾ ಕೇಂದ್ರಗಳನು ಸೂಕ್ಷ್ಮ ಕೇಂದ್ರಗಳನ್ನಾಗಿ ಪರಿಗಣಿಸಲಾಗಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಸೂಸೂತ್ರವಾಗಿ ನಡೆಯಲು ಮಾರ್ಗಾಧಿಕಾರಿಗಳು ಹಾಗೂ ಜಾಗೃತ ದಳದ ವೀಕ್ಷಕರನ್ನು ನೇಮಿಸಲಾಗುವುದು ಎಂದರು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲದೆ ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ತೆಗದುಕೊಂಡು ಹೋಗಲು ತಹಶೀಲ್ದಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಕೊಂಡೊಯ್ಯುವ ವಾಹನಕ್ಕೆ ಇದೇ ಪ್ರಥಮ ಬಾರಿಗೆ ಜಿ.ಪಿ.ಆರ್. ಎಸ್. ಸಹ ಅಳವಡಿಸಲಾಗಿದೆ. ಪರೀಕ್ಷೆಯಲ್ಲಿ ನಕಲು ಮಾಡುವ ಅಭ್ಯರ್ಥಿಗಳು ಮತ್ತು ಅದಕ್ಕೆ ಸಹಕರಿಸಿ ಅಕ್ರಮದಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದರು.
ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೇಂದ್ರದಲ್ಲಿಯೆ ಹಾಜರಿದ್ದು, ಪಿಯುಸಿ ಮಂಡಳಿಯ ನಿರ್ದೇಶನದಂತೆ ಎಲ್ಲ ಅಗತ್ಯ ಮುನ್ನೆಚರಿಕೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರದ ಅಧೀಕ್ಷರಿಗೆ ಸೂಚನೆ ನೀಡಿದ ಜಿಲ್ಲಾ ಧಿಕಾರಿಗಳು, ಪರೀಕ್ಷಾ ಆರಂಭದಲ್ಲಿಯೇ ಹೋಳಿ ಹಬ್ಬ ಬರುವುದ ರಿಂದ ಈ ಬಗ್ಗೆಯೂ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಎಂದರು.
ಮೊಬೈಲ್ ನಿಷೇಧ: ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್ ಫೋನ್, ಪೇಜರ್, ಬ್ಲೂಟೂತ್, ವೈರ್‌ಲೆಸ್ ಸೆಟ್, ಸ್ಲೆ„ಡರೂಲ್ ಕ್ಯಾಲ್ಕುಲೇಟರ್, ವಾಚ್ ಕ್ಯಾಲ್ಕುಲೇಟರ್, ಪಠ್ಯ-ಪುಸ್ತಕ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವುದನ್ನು ನಿಷೇ ಧಿಸಲಾಗಿದೆ ಎಂದ ಅವರು, ನಕಲು ಮಾಡುವ ಅಭ್ಯರ್ಥಿಗಳು ಮತ್ತು ಅದಕ್ಕೆ
ಸಹಕರಿಸಿ ಅಕ್ರಮದಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವದೆಂದರು.
ತಹಶೀಲ್ದಾರ್ ಪ್ರಕಾಶ ಚಿಂಚೋಳಿಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜ ಡಿ. ಕಲಬುರಗಿ, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ಮುಖ್ಯ ಮೇಲ್ವಿಚಾರಕರು ಸಭೆಯಲ್ಲಿ
ಪಾಲ್ಗೊಂಡಿದ್ದರು.