Advertisement

ಕೋವಿಡ್ ನಿಯಂತ್ರಣಕ್ಕೆ ಮುಂದಾಗಿ

08:56 PM Nov 07, 2020 | Suhan S |

ಗದಗ: ಕೋವಿಡ್‌ ನಿಯಂತ್ರಣ ಕುರಿತು ಜಿಲ್ಲೆಯ ಎಲ್ಲ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ ಜನರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸುವದರೊಂದಿಗೆ ಸೋಂಕು ಹರಡುವಿಕೆಯನ್ನು ತಡೆಯಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್‌ ವಿಡಿಯೋ ಕಾನ್ಫೆರೆನ್ಸ್‌ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ್‌, ತಾಪಂ ಇಒಗಳು, ಕೃಷಿ, ಆರೋಗ್ಯ ಇಲಾಖಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫ ರೆನ್ಸ್‌ ಮೂಲಕ ಮಾತನಾಡಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ -19 ನಿಯಂತ್ರಣ ಮಾರ್ಗಸೂಚಿಗಳ ಪಾಲನೆಗೆ ಕ್ರಮ ವಹಿಸಬೇಕು. ಆರೋಗ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯಿಂದ ಕೋವಿಡ್‌ ಸೊಂಕು ನಿಯಂತ್ರಣಕ್ಕಾಗಿ ಐಇಸಿ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿಆಯೋಜಿಸಿ, ಜನರಲ್ಲಿ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.

ಕೋವಿಡ್‌-19 ಸೋಂಕಿಗೆ ಔಷದಿ ಬರುವುದರೊಳಗಾಗಿ ಸರ್ಕಾರಿ, ಖಾಸಗಿ ಆರೋಗ್ಯ ಆಸ್ಪತ್ರೆಗಳ ವೈದ್ಯರು ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಕೊರೊನಾ ವಾರಿಯರ್ಗಳು, ಪ್ಯಾರಾಮೆಡಿಕಲ್‌ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಬೇಕು. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಿ ಪರೀಕ್ಷಿಸುವ ಕಾರ್ಯ ನಿರಂತರವಾಗಿ ನಡೆಸಬೇಕು. ಗೃಹ ಬಂಧನದಲ್ಲಿರುವವರ ಮೇಲೆ ಅಧಿಕಾರಿಗಳು ನಿಯಮಿತವಾಗಿ ಮನೆಗೆ ಭೇಟಿ ನೀಡಿ ನಿಗಾ ವಹಿಸಬೇಕು. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಐವತ್ತು ಆಕ್ಸಿಜನ್‌ ಸಂಪರ್ಕದ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಸೋಂಕಿತರಿಗೆ ಅಲ್ಲಿಯೇ ಸೂಕ್ತ ಚಿಕಿತ್ಸೆ ನೀಡಬೇಕೆಂದು ತಿಳಿಸಿದರು.

ಕೃಷಿ, ತೋಟಗಾರಿಕೆ ಇಲಾಖೆಗಳು ರೈತರಿಗೆ ಬಿತ್ತನೆ ಬೀಜ, ಗೊಬ್ಬರ, ಬೆಳೆಗಳ ಸಂರಕ್ಷಣೆ ಕುರಿತಂತೆ ಕಾಲಕಾಲಕ್ಕೆ ರೈತರಿಗೆ ಸಲಹೆ ಸೂಚನೆಗಳನ್ನು ನೀಡಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ ರಸಗೊಬ್ಬರ ಕೊರತೆಯಾಗದಂತೆ ಅಧಿ  ಕಾರಿಗಳು ನಿಗಾ ವಹಿಸಬೇಕು. ರೈತರು ನಿಗದಿತ ಅವಧಿಯೊಳಗೆ ವಿಮಾ ಪಾವತಿಸಲು ಸೂಕ್ತ ಮಾರ್ಗದರ್ಶನ ನೀಡಬೇಕು. ಕಳೆದ ವರ್ಷದ ಪ್ರವಾಹದಲ್ಲಿ ಮನೆ ಹಾನಿಯೊಳಗಾದವರಿಗೆ ನಿಗದಿತ ಸಮಯದಲ್ಲಿ ಮನೆ ನಿರ್ಮಿಸಲು ಸೂಚಿಸಿ, ಪರಿಹಾರ ಕೋರಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವೇ ಇಥ್ಯರ್ತಗೊಳಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಹಾನಿಗೀಡಾಗಿದ್ದು, ತಕ್ಷಣವೇ ಆಯಾ ತಹಶೀಲ್ದಾರ್‌ರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳ ರಸ್ತೆ ಸುಧಾರಣೆಗೆ ಸೂಕ್ತ ಕ್ರಮ ವಹಿಸಬೇಕು ಎಂದರು.

Advertisement

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶ ಕುಮಾರ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರ ಸಭೆ ಪೌರಾಯುಕ್ತ ರಮೇಶ್‌ ಜಾಧವ, ಡಿಎಚ್‌ಒ ಡಾ| ಸತೀಶ ಬಸರೀಗಿಡದ ಸೇರಿದಂತೆ ಎಲ್ಲ ತಾಲೂಕುಗಳ ತಹಶೀಲ್ದಾರ್‌ರು, ತಾ.ಪಂ. ಇಒ ಅಧಿಕಾರಿಗಳು, ಆರೋಗ್ಯ, ಕೃಷಿ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next