Advertisement

ಕೋವಿಡ್ ಲಸಿಕೆ ಗುರಿ ಸಾಧನೆಗೆ ಜಿಲ್ಲಾಧಿಕಾರಿ ಸೂಚನೆ

01:10 PM Mar 16, 2021 | Team Udayavani |

ಹಾಸನ: ಕೋವಿಡ್ ಲಸಿಕಾ ಹಾಕುವ ಅಭಿಯಾ ನದಲ್ಲಿ ಹಿಂದುಳಿದಿರುವ ತಾಲೂಕುಗಳು ತ್ವರಿತವಾಗಿ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮ ವಾರ ಎಲ್ಲಾ ತಹಶೀಲ್ದಾರರೊಂದಿಗೆ ವಿಡಿಯೋ ಸಂವಾದ ನಡೆಸಿ, ಗ್ರಾಪಂ, ಕಂದಾಯ, ಆರೋಗ್ಯ ಕಾರ್ಯಕರ್ತೆಯರು ಶೀಘ್ರವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸೂಚಿಸಿದರು.

ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಜಿಲ್ಲೆಗೆ ಬರುವವರನ್ನು ಪತ್ತೆ ಮಾಡಿ ಕೋವಿಡ್ ನೆಗೆಟಿವ್‌ ವರದಿ ಇರುವವರಿಗೆ ಮಾತ್ರ ಜಿಲ್ಲೆಗೆ ಪ್ರವೇಶ ನೀಡಬೇಕು. ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದ್ದು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಂಘ ಸಂಸ್ಥೆಗಳು ಜನರಲ್ಲಿ ಸಾಮಾಜಿಕ ಅಂತರ ಕಾಪಾಡಲು, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಕರಪತ್ರ ಹಂಚಬೇಕು: 60 ವರ್ಷ, 45 ವರ್ಷ ಮೇಲ್ಪಟ್ಟ ಬಹು ಸ್ವರೂಪದ ಆರೋಗ್ಯ ಸಮಸ್ಯೆ ಉಳ್ಳವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಅರಿವು ಮೂಡಿಸಲು ರಸ್ತೆ ಬದಿ, ಸಂತೆಗಳು, ಜನಸಂದಣಿ ಸೇರುವ ಸ್ಥಳಗಳಲ್ಲಿ ಪೋಸ್ಟರ್‌ ಅಂಟಿಸಿ ಜೊತೆಗೆ ಕರಪತ್ರ ಹಂಚಬೇಕು ಎಂದು ಹೇಳಿದರು.

ರೈತರ ನೋಂದಣಿ ಮಾಡಿಸಿ: ಮದುವೆ ಶುಭ ಸಮಾರಂಭ, ಮನರಂಜನಾ ಸ್ಥಳಗಳು, ಸಿನಿಮಾ ಮಂದಿರಗಳಲ್ಲಿ ಹಾಗೂ ಶವಸಂಸ್ಕಾರ ನಡೆಯುವ ಸ್ಥಳಗಳಲ್ಲಿ ಹೆಚ್ಚು ಜನ ಸೇರದಂತೆ ನಿಗಾವಹಿಸಿ ಎಂದು ಜಿಲ್ಲಾಧಿಕಾರಿಯವರು, ರೈತ ಸಂಪರ್ಕ ಕೇಂದ್ರಗಳಿಂದ ಮಾಹಿತಿಯನ್ನು ಪಡೆದು ಫ್ರೊಟ್ಸ್‌ ಐ.ಡಿ ಪಡೆದಿಲ್ಲದಂತಹ ರೈತರಿಗೆ ಮಾಹಿತಿ ನೀಡಿ ನೋಂದಣಿ ಮಾಡಲು ಎಲ್ಲಾ ತಾಲೂಕಿನ ತಹಶೀಲ್ದಾರರು, ಗ್ರಾಮ ಲೆಕ್ಕಿಗರು ಹಾಗೂ ಗ್ರಾಮ ಸಹಾಯಕರು ಹೆಚ್ಚಿನ ಸಹಕಾರ ನೀಡಬೇಕು ಎಂದು ನಿರ್ದೇಶಿಸಿದರು.

Advertisement

ಭೂಮಿ ಒದಗಿಸಿ: ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಸ್ಥಳಾವಕಾಶ ನೀಡಬೇಕಾಗಿದ್ದು, ಸ್ಮಶಾನ ಇಲ್ಲದ ಗ್ರಾಮಗಳಿಗೆ ಆದಷ್ಟು ಬೇಗ ಭೂಮಿಯನ್ನು ಒದಗಿಸಿ ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿ, ಈಗಾಗಲೇ ಮರಣ ಹೊಂದಿರುವಂತವರ ಹೆಸ ರನ್ನು ರೇಷನ್‌ ಕಾರ್ಡ್‌ನಿಂದ ತೆಗೆಯಲು ಆಧಾರ್‌, ರೇಷನ್‌ ಹಾಗೂ ಇತರೆ ದಾಖಲಾತಿಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಪಂ ಸಿಇಒ ಬಿ.ಎ.ಪರಮೇಶ್‌, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪವಿಭಾಗಾಧಿ ಕಾರಿ ಬಿ.ಎ.ಜಗದೀಶ್‌, ಜಂಟಿ ಕೃಷಿ ನಿರ್ದೇಶಕ ರವಿ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕಿ ರೇವತಿ ಸುಧಾಕರ್‌, ಡಿಎಚ್‌ಒ ಡಾ.ಸತೀಶ್‌ಕುಮಾರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ದಿಲೀಪ್‌, ತಹಶೀಲ್ದಾರ್‌ ಶಿವಶಂಕರಪ್ಪ, ಅಧಿಕಾರಿ ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next