Advertisement

ಕೋವಿಡ್‌ ಲಸಿಕಾ ಕಾರ್ಯ ಅಚ್ಚುಕಟ್ಟು ನಿರ್ವಹಣೆಗೆ ಡಿಸಿ ಸೂಚನೆ

03:46 PM Jan 31, 2021 | Team Udayavani |

ಗದಗ: ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕೋವಿಡ್ ಲಸಿಕಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಿಯಂತ್ರಣ ದಲ್ಲಿವೆ. ಆದರೂ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯವನ್ನು ಮಾಡಿ, ಅವರನ್ನು ತಪಾಸಣೆಗೆ ಒಳಪಡಿಸಬೇಕು.

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಕೊರೊನಾ ಸೋಂಕು ಜಿಲ್ಲೆಯಲ್ಲಿ ನಿಯಂತ್ರಣದಲ್ಲಿದೆ. ನಿರ್ನಾಮವಾಗಿಲ್ಲ ಎಂಬುದನ್ನು ಸಾರ್ವಜನಿಕರಿಗೆ ಮನವಿ ಮಾಡಿಕೊಡುವ ಮೂಲಕ ಸುರಕ್ಷತಾ ಕ್ರಮ ಪಾಲಿಸುವಂತೆ ಜಾಗೃತಿಗೊಳಿಸುವ ಕಾರ್ಯವನ್ನು ಮಾಡಬೇಕು ಎಂದರು.

ಕೋವಿಡ್ ಸೋಂಕಿಗೆ ಲಸಿಕೆ ವಿತರಣೆ ಕಾರ್ಯ ಆರಂಭವಾಗಿದ್ದು, ಲಸಿಕೆ ಕುರಿತು ಊಹಾಪೋಹ ಸುದ್ದಿಗಳಿಗೆ ಕಿವಿಗೊಡದೇ ಲಸಿಕೆ ಪಡೆಯಬೇಕು. ಲಸಿಕೆ ಪಡೆದವರಿಗೆ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಪ್ರಥಮ ಹಂತದಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ವಿತರಿಸಲಾಗುತ್ತಿದ್ದು, ದ್ವತೀಯ ಹಂತದಲ್ಲಿ ಕಂದಾಯ ಹಾಗೂ ಪಂಚಾಯತ್‌ ರಾಜ್‌ ಇಲಾಖೆಗಳ ನೌಕರರಿಗೆ ಲಸಿಕೆ ವಿತರಿಸಲಾಗುವುದು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ:ರಾಜೀನಾಮೆಗೆ 7 ಸದಸ್ಯರ ನಿರ್ಧಾರ

Advertisement

ಕಳೆದ ಸಾಲಿನಲ್ಲಿ ಪ್ರವಾಹಕ್ಕೊಳಗಾದ ಮನೆಗಳಿಗೆ ಪರಿಹಾರ ವಿತರಣೆ ಕುರಿತಂತೆ ಶೀಘ್ರವೇ ಸೂಕ್ತ ನಿರ್ಣಯ ಕೈಗೊಳ್ಳುವ ಮೂಲಕ ಪರಿಹಾರ ವಿತರಣೆಯನ್ನು ಮುಕ್ತಾಯಗೊಳಿಸಬೇಕು. ಮನೆ ಹಾನಿಯಾದವರಿಗೆ ಮನೆ ನಿರ್ಮಿಸದಿದ್ದಲ್ಲಿ ನಿಯಮಾನುಸಾರ ಕ್ರಮ ವಹಿಸಬೇಕು ಎಂದರು.

ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ರವಿಕುಮಾರ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್‌. ರುದ್ರೇಶಪ್ಪ, ತಾಲೂಕು ತಹಶೀಲ್ದಾರ್‌, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next