Advertisement

ದ.ಕನ್ನಡ: ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಆದೇಶ

03:13 PM Jul 29, 2022 | Team Udayavani |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ.

Advertisement

ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್‌ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ತೆರೆದಿರಲು ಅವಕಾಶ ನೀಡಲಾಗಿದೆ.

ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಪ್ರವೀಣ್ ಹತ್ಯೆ ಪ್ರಕರಣ ಎನ್ಐಎಗೆ ವಹಿಸಿದ ಸಿಎಂ ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next