Advertisement

ದ.ಕ.: ಜೂ. 30ರ ವರೆಗೆ ನಿಷೇಧಾಜ್ಞೆ

03:45 AM Jun 28, 2017 | Harsha Rao |

ಮಂಗಳೂರು: ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜೂ. 30ರ ಮಧ್ಯರಾತ್ರಿ ವರೆಗೆ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ವಿಸ್ತರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲೂ ಜೂ. 30ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

Advertisement

ಈ ವ್ಯಾಪ್ತಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರಕಾರಿ ಕಚೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. 
ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು ಹಾಗೂ ಯಾವುದೇ ûಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ಘೋಷಣೆ ಕೂಗುವುದು, ಪದ ಹಾಡುವುದು, ಸಂಜ್ಞೆಗಳನ್ನು ಉಪ ಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟನ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿ ಚಿತ್ರ ಅಂಟಿಸುವುದರಿಂದ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವ ಪ್ರೇರೇಪಿಸುವ ಕ್ರಮಗಳನ್ನು ನಿಷೇಧಿಸಲಾಗಿದೆ ಎಂದು ಪ್ರಕಟನೆ ಮೂಲಕ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next