ಚಿಕ್ಕಬಳ್ಳಾಪುರ: ದೇಶಾದ್ಯಂತ ಇಂದಿನಿಂದ ಕೋವಿಡ್ ವ್ಯಾಕ್ಸಿನ್ ನೀಡುವ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ ಬಳಿಕ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಸಿಬ್ಬಂದಿ ಚಂದ್ರಕಲಾ ಅವರಿಗೆ ಲಸಿಕೆ ನೀಡಿ ವಿದ್ಯುಕ್ತವಾಗಿ ಚಾಲನೆ ನೀಡಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ ಜಿಲ್ಲಾದ್ಯಂತ 9 ಕೇಂದ್ರದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಸುಮಾರು 5 ಸಾವಿರ ಜನಕ್ಕೆ ನೀಡುವಂತಹ ಲಸಿಕೆ ಸರಬರಾಜು ಆಗಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಸಿಇಓ ಪಿ.ಶಿವಶಂಕರ್, ಜಿಲ್ಲಾ ಎಸ್ಪಿ ಮಿಥುನ್ ಕುಮಾರ್, ಡಿಹೆಚ್‌ಓ ಡಾ.ಇಂದಿರಾ ಆರ್.ಕಬಾಡೆ, ಡಿವೈಎಸ್ಪಿ ರವಿಶಂಕರ್, ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ರಮೇಶ್, ಡಾ.ವಿಜಯ, ಡಾ.ಅನಿಲ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: LIVE Update: ರಾಜ್ಯಾದ್ಯಂತ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ
ಪ್ರಧಾನ ಮಂತ್ರಿಗಳು ದೇಶವನ್ನು ಉದ್ದೇಶಿಸಿ ನೀಡಿದ ಸಂದೇಶವನ್ನು ನಾಗರಿಕರು ಅಲಿಸಲು ಜಿಲ್ಲಾಸ್ಪತ್ರೆಯಲ್ಲಿ ಟಿವಿ ವ್ಯವಸ್ಥೆಯನ್ನು ಮಾಡಲಾಗಿತ್ತು.
ಇದನ್ನೂ ಓದಿ: ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ವಿಧ್ಯುಕ್ತ ಚಾಲನೆ