ಮುಂಡರಗಿ (ಗದಗ): ತಾಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿ ತಲೆಎತ್ತಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ ಸ್ವತಃ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಹಾಗೂ ಎಸ್ಪಿ ಯತೀಶ್ ಎನ್. ಜಂಟಿಯಾಗಿ ಮಂಗಳವಾರ ದಾಳಿ ನಡೆಸಿದ್ದು, ಸುಮಾರು 200 ಟಿಪ್ಪರ್‌ಗಿಂತ ಅಧಿಕ ಮರಳು ರಾಶಿಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಸಿಂಗಟಾಲಕೇರಿ ಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ಆರು ಜೆಸಿಬಿ ಹಾಗೂ 40ಕ್ಕೂ ಹೆಚ್ಚು ಟಿಪ್ಪರ್‌ಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇದನ್ನೂ ಓದಿ:ಶಿವಮೊಗ್ಗ: ಪುರಾಣ ಪ್ರಸಿದ್ಧ ದೇವಸ್ಥಾನದ ಬೀಗ ಒಡೆದ ಖದೀಮರು, ದೇವರ ಆಭರಣಗಳು ಕಳವು
ಕೆಲವೇ ತಿಂಗಳ ಹಿಂದೆ ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಸಿಪಿಐ, ತಹಶೀಲ್ದಾರ್ ಮತ್ತಿತರೆ ಅಧಿಕಾರಿಗಳು ತುಂಗಭದ್ರಾ ನದಿ ಪಾತ್ರದಲ್ಲಿರುವ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದರು. ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟ ನಡೆಸದಂತೆ ಎಚ್ಚರಿಕೆ ನೀಡಿದ್ದರು. ಆದರೂ, ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.