Advertisement

ಖಡಕ್‌ ಡಿಸಿ ವರ್ಗಾವಣೆ ; ರೋಹಿಣಿ ಸಿಂಧೂರಿ ಹಾಸನದಿಂದ ಬೆಂಗಳೂರಿಗೆ 

12:32 PM Feb 22, 2019 | Team Udayavani |

ಹಾಸನ: ಜಿಲ್ಲಾಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. 

Advertisement

ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ ಮಾಡಲಾಗಿದೆ. 

ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರಕಾರ ತಿಳಿಸಿದೆ. 

2018 ರಲ್ಲೂ ಅವಧಿಗೂ ಮುನ್ನ ರೋಹಿಣಿ ಅವರನ್ನು ವರ್ಗಾವಣೆ ಮಾಡಲಾಗಿತ್ತು.ಇದನ್ನು ರೋಹಿಣಿ ಪ್ರಶ್ನಿಸಿದ್ದರು. ಚುನಾವಣಾ ಆಯೋಗ ವರ್ಗಾವಣೆಗೆ ತಡೆಯಾಜ್ಞೆ ನೀಡಿತ್ತು. 

ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ.ವೆಂಕಟೇಶ್‌ ಅವರನ್ನು ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು, ಹಾವೇರಿಯ ನೂತನ ಜಿಲ್ಲಾಧಿಕಾರಿಯಾಗಿ ಕೃಷ್ಣ ಬಜ್ಪೆಯಿ ಅವರನ್ನು ನೇಮಕ ಮಾಡಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next