Advertisement

2ನೇ ಡೋಸ್‌ ಲಸಿಕೆ ಪಡೆದ ಜಿಲ್ಲಾಧಿಕಾರಿ

03:40 PM Mar 10, 2021 | Team Udayavani |

ಮೈಸೂರು: ಜನತೆ ಕೋವಿಡ್ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪಡೆದು ಕೊಳ್ಳಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

Advertisement

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದುಮಾತನಾಡಿದ ಅವರು, ಫೆಬ್ರವರಿ 8ರಂದುಮೊದಲ ಡೋಸ್‌ ಲಸಿಕೆ ಪಡೆದಿದ್ದೆ. 28ದಿನಗಳು ಆಗಿರುವ ಹಿನ್ನೆಲೆಯಲ್ಲಿ 2ನೇ ಡೋಸ್‌ ಲಸಿಕೆ ಪಡೆದಿದ್ದೇನೆ. ಲಸಿಕೆತೆಗೆದುಕೊಂಡ ನನಗೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಲಿಲ್ಲ. ಲಸಿಕೆ ಪಡೆದಕೆಲವೊಬ್ಬರಿಗೆ ಸಾಮಾನ್ಯವಾಗಿ ಜ್ವರ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಲಸಿಕೆ ನೀಡುವವರೆ ಜ್ವರದ ಮಾತ್ರೆಯನ್ನು ಸಹ ಉಚಿತವಾಗಿ ನೀಡುತ್ತಿದ್ದಾರೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆಯನ್ನುಉಚಿತವಾಗಿ ನೀಡುತ್ತಿದ್ದಾರೆ. ಇದನ್ನು ಸದು ಪಯೋಗ ಪಡಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು. ಹೊಸದಾಗಿ ಬಂದಾಗಭಯವಾಗುವುದು ಸಾಮಾನ್ಯ. ಪ್ರಧಾನಮಂತ್ರಿಯಿಂದ ಹಿಡಿದು ಪೌರಕಾರ್ಮಿಕರವರೆಗೂ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದು ಅದರ ಉಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಲಸಿಕೆಯನ್ನು ಪಡೆದುಕೊಳ್ಳುವವರ ಸಂಖ್ಯೆಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರಗಳನ್ನು ಸಹ ಹೆಚ್ಚಾಗಿತೆರೆಯಲಾಗುತ್ತಿದ್ದು, ಮುಂದೆ ಪ್ರಾಥಮಿಕಆರೋಗ್ಯ ಕೇಂದ್ರಗಳಲ್ಲೂ ಸಹ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆರ್‌.ಸಿ.ಎಚ್‌ ಅಧಿಕಾರಿಡಾ. ಎಲ್‌. ರವಿ, ಜಿಲ್ಲಾ ಸರ್ಜನ್‌ ಡಾ.ರಾಜೇಶ್ವರಿ, ಡಾ.ಮೀನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕುಟುಂಬದವರಿಗೂ ಕೋವಿಡ್ ಲಸಿಕೆ :  ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಾಯಿ ಶ್ರೀಲಕ್ಷ್ಮೀ ರೆಡ್ಡಿ, ತಂದೆ ಜೈಪಾಲ ರೆಡ್ಡಿ ಹಾಗೂ ಮಾವ ನಾರಾಯಣ ರೆಡ್ಡಿ ಅವರು ಮೊದಲನೆ ಡೋಸ್‌ ಲಸಿಕೆ ಪಡೆದುಕೊಂಡರು. 2ನೇ ಡೋಸ್‌ ಲಸಿಕೆ ಪಡೆದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಪ್ರಮಾಣ ಪತ್ರ ನೀಡಲಾಯಿತು

Advertisement

 

Advertisement

Udayavani is now on Telegram. Click here to join our channel and stay updated with the latest news.

Next