Advertisement

ಸಮನ್ವಯದಿಂದ ಯುದ್ದೋಪಾದಿ ಕೆಲಸ ಮಾಡಿ : ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

06:21 PM Apr 18, 2021 | Team Udayavani |

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆಯ ಪ್ರಕರಣಗಳು ಹೆಚ್ಚಾಗದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಹಾಗೂ ಗುರಿಯಂತೆ ತ್ವರಿತವಾಗಿ ಸಂಪರ್ಕಿತರ ಪತ್ತೆ, ತಪಾಸಣೆ ಜತೆಗೆ ಲಸಿಕಾ ಕಾರ್ಯದಲ್ಲಿ ಯಾವುದೇ ಹಿನ್ನಡೆಯಾಗದಂತೆ, ಪರಸ್ಪರ ಸಮನ್ವಯದಿಂದ ಯುದ್ದೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಆರೋಗ್ಯ ಅಧಿ ಕಾರಿಗಳೊಂದಿಗೆ ಮಾತನಾಡಿದರು. ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲೆಯ ಆಸ್ಪತ್ರೆಗಳಲ್ಲಿರುವ ಹಾಸಿಗೆಗಳ ಮಾಹಿತಿ, ಆಕ್ಸಿಜನ್‌ ಸಹಿತ ಬೆಡ್‌ಗಳ ಸಂಖ್ಯೆ, ಐಸಿಯು ಬೆಡ್‌ಗಳು, ಕೋವಿಡ್‌ಕೇರ್‌ ಸೆಂಟರ್‌ಗಳಲ್ಲಿ ಕಳೆದ ಸಾಲಿನಲ್ಲಿ ವ್ಯವಸ್ಥೆ ಮಾಡಿದ ಬೆಡ್‌ಗಳ ಸಂಖ್ಯೆ ಒಳಗೊಂಡಂತೆ ಪೂರ್ಣ ಮಾಹಿತಿ ಒಳಗೊಂಡಿರಬೇಕು. ಎಲ್ಲ ವ್ಯವಸ್ಥೆಗಳ ಸಿದ್ಧತೆ ಮಾಡಿಕೊಳ್ಳಿ. ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಅಗತ್ಯ ಸಿಬ್ಬಂದಿ ನೇಮಕಾತಿಗೆ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಿ. ಕೋವಿಡ್‌ ನಿಯಂತ್ರಣ ಹಾಗೂ ಚಿಕಿತ್ಸಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕೆಂದು ಸೂಚನೆ ನೀಡಿದರು.

ಕೋವಿಡ್‌ ನಿಯಂತ್ರಣದ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಎಲ್ಲ ಅ ಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಉಪವಿಭಾಗಾಧಿ  ಕಾರಿಗಳು, ತಹಶೀಲ್ದಾರ್‌ಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಹಾಗೂ ಪೊಲೀಸ್‌ ಅಧಿ ಕಾರಿಗಳು, ತಾಪಂ ಇಒಗಳು ಮಾರ್ಗಸೂಚಿಯ ಅನುಷ್ಠಾನಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು. ಇಂದಿನಿಂದಲೇ ಕಾರ್ಯಾನುಷ್ಠಾನಕ್ಕೆ ಮುಂದಾಗಬೇಕೆಂದು ಸೂಚನೆ ನೀಡಿದರು.

ಸರ್ಕಾರ ಹೊರಡಿಸಿರುವ ಕೋವಿಡ್‌ ಮಾರ್ಗಸೂಚಿಯಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯ. ಸಾಮಾಜಿಕ ಆಚರಣೆಗಳು ಅಥವಾ ಸಮಾರಂಭಗಳಲ್ಲಿ ಸರ್ಕಾರದ ಮಾರ್ಗಸೂಚಿಯಂತೆ 3.25 ಮೀಟರ್‌ ಅಂತರ ಪಾಲಿಸುವುದು ಕಡ್ಡಾಯ. ಮದುವೆ-ತೆರೆದ ಪ್ರದೇಶಗಳಲ್ಲಿ 200 ಜನರು ಮೀರಬಾರದು. ಕಲ್ಯಾಣ ಮಂಟಪ, ಸಭಾಂಗಣ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 100 ಜನರು ಮೀರುವಂತಿಲ್ಲ. ಜನ್ಮದಿನ ಹಾಗೂ ಇತರೆ ಆಚರಣೆಗಳಲ್ಲಿ 50 ಜನರು, ಸಭಾಂಗಣ ಇತ್ಯಾದಿ ಮುಚ್ಚಿದ ಪ್ರದೇಶದಲ್ಲಿ 25 ಜನರು ಮಾತ್ರ ಭಾಗವಹಿಸಬೇಕು. ನಿಧನ ಅಥವಾ ಶವ ಸಂಸ್ಕಾರ-ತೆರೆದ ಪ್ರದೇಶದಲ್ಲಿ 50 ಜನರು, ಹಾಲ್‌, ಸಭಾಂಗಣಳದಲ್ಲಿ 25 ಜನರು ಮೀರಬಾರದು. ಅಂತ್ಯಕ್ರಿಯೆಯಲ್ಲಿ 25 ಜನ ಭಾಗವಹಿಸಬೇಕು. ಇತರೆ ಸಮಾರಂಭಗಳಲ್ಲಿ ಹಾಲ್‌ ನ ವಿಸ್ತೀರ್ಣಕ್ಕೆ ತಕ್ಕಂತೆ 50 ಜನರು ಮೀರಬಾರದು. ರಾಜಕೀಯ ಸಭೆಗಳು ಅಥವಾ ಸಮಾರಂಭಗಳಿಗೆ 200 ಜನರ ಮಿತಿಗೊಳಿಸಲಾಗಿದೆ. ಧಾರ್ಮಿಕ ಆಚರಣೆ ಅಥವಾ ಸಮಾರಂಭಗಳನ್ನು ನಿಷೇಧಿ ಸಿ ಆದೇಶ ಹೊರಡಿಸಲಾಗಿದೆ. ಈ ಆದೇಶ ಅನುಷ್ಠಾನಕ್ಕೆ ಎಲ್ಲರೂ ಕಾರ್ಯೋನ್ಮುಖರಾಗಬೇಕು ಹಾಗೂ ಕಾಲಕಾಲಕ್ಕೆ ಸರ್ಕಾರ ಹೊರಡಿಸುವ ಕೋವಿಡ್‌ ನಿಯಮಾವಳಿಗಳ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಸಭಾಂಗಣ ಕಲ್ಯಾಣ ಮಂಟಪ, ಸಿನಿಮಾ ಮಂದಿರ ಹಾಲ್‌ಗ‌ಳನ್ನು ಕಡ್ಡಾಯವಾಗಿ ಸ್ಯಾನಿಟೈಸ್‌ ಮಾಡಿಸಬೇಕು. ಮದುವೆ ಸಮಾರಂಭಕ್ಕೆ ಅನುಮತಿ ಕಡ್ಡಾಯ. ಸಾರ್ವಜನಿಕರು ಸರ್ಕಾರದ ಪ್ರಮಾಣೀಕೃತ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾಮಾಜಿಕ ಅಂತರದೊಂದಿಗೆ ಮಾಸ್ಕ್ ಧರಿಸಿ ಓಡಾಡುವಂತೆ ತಿಳಿಸಿದರು. ಜಿಪಂ ಸಿಇಒ ಮಹಮ್ಮದ ರೋಷನ್‌, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಕೆ.ಜಿ.ದೇವರಾಜು, ಹಾವೇರಿ ಉಪವಿಭಾಗಾಧಿ ಕಾರಿ ಉಳ್ಳಾಗಡ್ಡಿ, ಸವಣೂರ ಉಪವಿಭಾಗಾ ಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್‌.ಎಸ್‌. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್‌. ಹಾವನೂರ, ನಗರಾಭಿವೃದ್ಧಿ ಕೋಶದ ಅಭಿಯಂತರ ವಿರಕ್ತಿಮಠ, ಡಾ.ಜಯಾನಂದ, ಡಾ.ಪ್ರಭಾಕರ ಕುಂದೂರ ಇತರ ಅ ಧಿಕಾರಿಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next