Advertisement

ಅನರ್ಹರು ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಿ: ಡಿಸಿ ಸಂಜಯ

04:11 PM Feb 26, 2021 | Team Udayavani |

ಹಾವೇರಿ: ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆಯಲು ಅರ್ಹತೆ ಇಲ್ಲದ ಸರ್ಕಾರಿ, ಅರೇ ಸರ್ಕಾರಿ ಹಾಗೂ ನಿಗಮ-ಮಂಡಳಿ ಸೇರಿದಂತೆ ವಿವಿಧ ಶೈಕ್ಷಣಿಕ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವವರು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ತಕ್ಷಣ ಹಿಂದಿರುಗಿಸಬೇಕು. ಇಲ್ಲದಿದ್ದರೆ, ಅಂತಹ ಅಧಿಕಾರಿ, ನೌಕರರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಎಚ್ಚರಿಕೆ ನೀಡಿದ್ದಾರೆ.

Advertisement

ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅ ಧಿಕಾರಿ, ನೌಕರ ಸರ್ಕಾರದಿಂದ ವೇತನ, ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ. ಆದ್ದರಿಂದ ಇಂತಹ ಅ ಧಿಕಾರಿ, ನೌಕರರು ಮತ್ತು ನೌಕರರ ಅವಲಂಬಿತ ಕುಟುಂಬ ಸದಸ್ಯರು ಈಗಾಗಲೇ ಬಿಪಿಎಲ್‌ ಪಡಿತರ ಚೀಟಿಗಳನ್ನು ಹೊಂದಿರುವುದು ಆಹಾರ ಸಚಿವರ ಗಮನಕ್ಕೆ ಬಂದಿದ್ದು, ಅವುಗಳನ್ನು ಕೂಡಲೇ ಹಿಂದಿರುಗಿಸುವಂತೆ ಸೂಚನೆ ನೀಡಲು ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಪಿಎಲ್‌ ಕಾರ್ಡ್‌ನ್ನು ಹೊಂದಿರುವ ನೌಕರರು ತಕ್ಷಣವೇ ಆಯಾ ತಾಲೂಕು ತಹಶೀಲ್ದಾರ್‌ ಕಚೇರಿಗಳಿಗೆ ಹಿಂದಿರುಗಿಸಲು ಜಿಲ್ಲಾಧಿಕಾರಿಗಳು ಖಡಕ್‌ ಸೂಚನೆ ನೀಡಿದ್ದಾರೆ.

ಈ ಎಚ್ಚರಿಕೆ ನೀಡಿದ್ದಾಗ್ಯೂ ಜಿಲ್ಲೆಯ ಸರ್ಕಾರಿ, ಸರ್ಕಾರದ ನಿಗಮ,ಮಂಡಳಿ, ಪ್ರಾಕಾರ, ವಿಶ್ವ ವಿದ್ಯಾಲಯ, ಸಂಸ್ಥೆಯ ಅಧಿ ಕಾರಿ, ನೌಕರರು ಮತ್ತು ನೌಕರರ ಅವಲಂಬಿತ ಕುಟುಂಬ ಸದಸ್ಯರು ಈಗಾಗಲೇ ಬಿಪಿಎಲ್‌ ಪಡಿತರ ಚೀಟಿಯನ್ನು ಹೊಂದಿದ್ದರೆ ಅವುಗಳನ್ನು ಸ್ವಯಂ ಪ್ರೇರಣೆಯಿಂದ ಮಾ.10 ರೊಳಗಾಗಿ ಜಿಲ್ಲೆಯ ಆಯಾ ತಹಶೀಲ್ದಾರ್‌ ಕಚೇರಿಯ ಆಹಾರ ಶಾಖೆಗೆ ಹಿಂದಿರುಗಿಸಬೇಕು.

ಒಂದೊಮ್ಮೆ ಕಾರ್ಡ್‌ಗಳನ್ನು ಹಿಂತಿರುಗಿಸದೇ ಉಳಿಸಿಕೊಂಡಲ್ಲಿ ಕಾನೂನಿನ್ವಯ ಕ್ರಮ ವಹಿಸಿ, ಸಂಬಂಧಿ  ಸಿದ ಅ ಧಿಕಾರಿ, ನೌಕರರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಶಿಸ್ತಿನ ಕ್ರಮ ಕೈಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next