ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಗುರುವಾರ ರಾತ್ರಿಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲನುಭವಿಸಿದೆ. ಆಲ್ ರೌಂಡ್ ಪ್ರದರ್ಶನ ತೋರಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರು ವಿಕೆಟ್ ಅಂತರದ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೂರು ವಿಕೆಟ್ ಅಂತರದಿಂದ 149 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ್ದ ಲಕ್ನೋ ತಂಡ 19.4 ಓವರ್ ನಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ಲಕ್ನೋ ಪರ ಕ್ವಿಂಟನ್ ಡಿಕಾಕ್ ಆಕರ್ಷಕ ಅರ್ಧಶತಕ ಬಾರಿಸಿದರು.
ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಗೆ ದಂಡ ವಿಧಿಸಲಾಗುತ್ತಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಇದು ತಂಡದ ಮೊದಲ ಅಪರಾಧವಾಗಿರುವುದರಿಂದ ಡಿಸಿ ನಾಯಕ ರಿಷಭ್ ಪಂತ್ ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಇದನ್ನೂ ಓದಿ:ಧೋನಿ ಜಾಹೀರಾತು ಪ್ರಸಾರಕ್ಕೆ ತಡೆ
2021ರ ಐಪಿಎಲ್ ಬಳಿಕ ನಿಧಾನಗತಿಯ ಓವರ್ ರೇಟ್ ವಿರುದ್ಧ ಬಿಸಿಸಿಐ ಕಠಿಣ ನಿಯಮ ಜಾರಿ ಮಾಡಿದೆ. ಮೊದಲ ಪ್ರಕರಣದಲ್ಲಿ ನಾಯಕನಿಗೆ 12 ಲಕ್ಷ ರೂ. ದಂಡ, ಎರಡನೇ ಬಾರಿಗೆ 24 ಲಕ್ಷ ರೂ ದಂಡ ವಿಧಿಸಲಾಗುತ್ತದೆ. ಒಂದು ಆವೃತ್ತಿಯಲ್ಲಿ ಮೂರು ಬಾರಿ ನಿಧಾನಗತಿಯ ಓವರ್ ರೇಟ್ ಪ್ರಕರಣದ ನಡೆದರೆ ತಂಡದ ನಾಯಕನಿಗೆ 30 ಲಕ್ಷ ರೂ ದಂಡ ಮತ್ತು ಒಂದು ಪಂದ್ಯದ ನಿಷೇಧ ಶಿಕ್ಷೆ ನೀಡಲಾಗುತ್ತದೆ.