Advertisement
ಜಿಲ್ಲೆಯ ವಿವಿಧ ಕಡೆಗಳಲ್ಲಿ ರಸ್ತೆಯುದ್ದಕ್ಕೂ ತೆರೆದಿರುವ ಹತ್ತಿ ಕೇಂದ್ರಗಳು ರೈತರಿಂದ ಹತ್ತಿ ಖರೀದಿಸುತ್ತಿದ್ದು, ಮೊದಲೇ ಪ್ರವಾಹ, ಅತಿವೃಷ್ಟಿಯಿಂದ ತೊಂದರೆಗೀಡಾಗಿದ್ದ ರೈತರಗಾಯದ ಮೇಲೆ ಬರೆ ಎಳೆಯುತ್ತಿರುವ ಕುರಿತು “ಉದಯವಾಣಿ’ ನ.8ರಂದು ವರದಿ ಪ್ರಕಟಿಸಿತ್ತು.
Related Articles
Advertisement
ಕಾಯ್ದೆ ತಿದ್ದುಪಡಿಯಿಂದ ತೊಂದರೆ: ಸರ್ಕಾರ ಕೃಷಿ ಮಾರಾಟ ಕಾಯ್ದೆಯನ್ನು ತಿದ್ದುಪಡಿ ಮಾಡಿರುವುದು ಕೃಷಿ ಮಾರಾಟ ಇಲಾಖೆ ಅಧಿಕಾರಿಗಳ ಪಾಡು ಹಲ್ಲಿಲ್ಲದ ಹಾವಿನಂತಾಗಿದೆ. ಅನಧಿಕೃತ ಖರೀದಿದಾರರ ಮೇಲೆ ಕ್ರಮ ಕೈಗೊಳ್ಳುವ ಯಾವುದೇ ಅಧಿಕಾರ ಕೃಷಿ ಮಾರುಕಟ್ಟೆ ಅಧಿಕಾರಿಗಳಿಗಿಲ್ಲ ಎನ್ನಲಾಗುತ್ತಿದೆ.
ಕಳೆದ ಬಾರಿ ಅನಧಿಕೃತ ಹತ್ತಿ ಖರೀದಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು 23 ಲಕ್ಷಕ್ಕೂ ಅಧಿಕ ದಂಡ ವಿಧಿಸಿ 196 ಪ್ರಕರಣಗಳನ್ನು ದಾಖಲಿಸಿದ್ದರು. ಆದರೇ ಇತ್ತೀಚೆಗಷ್ಟೇ ಕಾಯ್ದೆ ತಿದ್ದುಪಡಿಯಂತೆ ಯಾರಿಗಾದರೂ ರೈತರು ತಮ್ಮ ಉತ್ಪನ್ನಗಳನ್ನು ಮಾರಬಹುದಾಗಿದ್ದು, ಕಾಯ್ದೆಯಲ್ಲಿ ಹಲವು ಸಡಿಲಿಕೆ ಇರುವುದರಿಂದ ಅಧಿಕೃತ ಪರವಾನಗಿ ಪಡೆಯದಿದ್ದರೂ ರೈತರಿಂದ ಖರೀದಿಸಲು ಅವಕಾಶವಿದೆ ಎಂದು ಕೃಷಿ ಮಾರಾಟ ಇಲಾಖೆ ಅಧಿಕಾರಿಯೊಬ್ಬರುಮಾಹಿತಿ ನೀಡಿದ್ದಾರೆ. ಇದರಿಂದಾಗಿ ರೈತರು ಮತ್ತಷ್ಟು ಅನ್ಯಾಯಕ್ಕೊಳಗಾಗುವ ಆತಂಕ ಎದುರಾಗಿದೆ.
ಹತ್ತಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ರೈತರಿಂದ ಅನಧಿ ಕೃತ ಕಡಿತಗಳ ಮೂಲಕ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. –ಡಾ.ರಾಗಪ್ರಿಯಾ, ಡಿಸಿ.