Advertisement
ತಾಲೂಕಿನ ಕಸಬಾ ಹೋಬಳಿ ಆವತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ತಾಲೂಕು ಆಡಳಿತ ವತಿಯಿಂದಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Related Articles
Advertisement
ತಹಶೀಲ್ದಾರ್ ಶಿವರಾಜ್ ಮಾತನಾಡಿ,ಜನಸಾಮಾನ್ಯರ ಅನುಕೂಲ ಕ್ಕಾಗಿ ಸರ್ಕಾರ ಅನೇಕಯೋಜನೆಗಳನ್ನು ಜಾರಿಗೆ ತಂದಿದೆ. ಜನರುಕಚೇರಿಗಳಿಗೆ ಅಲೆದಾಟವನ್ನು ತಪ್ಪಿಸಲು ಹಾಗೂಗ್ರಾಮಗಳ ಸರ್ವತೋ ಮುಖ ಅಭಿವೃದ್ಧಿಗೆ ಎಲ್ಲಾಇಲಾಖೆಗಳು ಒಂದೆಡೆ ಸೇರಿ ಸಮಸ್ಯೆಗಳಿಗೆ ಪರಿಹಾರನೀಡಿ ಆಯಾ ಗ್ರಾಮ ಅಭಿವೃದ್ಧಿಪಡಿಸುವುದೇ ಗ್ರಾಮವಾಸ್ತವ್ಯದ ಗುರಿಯಾಗಿದೆ. ಗ್ರಾಮ ವಾಸ್ತವ್ಯದಿಂದ ಸಮಸ್ಯೆ ಬಗೆಹರಿಸಲಾಗುತ್ತಿದೆ.
ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸಿ, ಸಮಸ್ಯೆಗಳನ್ನು ಸ್ಥಳಗಳಲ್ಲಿಯೇ ಬಗೆಹರಿಸಲಾಗುತ್ತದೆ. ಸರ್ಕಾರಿ ಸೌಲಭ್ಯಗಳನ್ನು ಸ್ಥಳದಲ್ಲಿಯೇ ಕೊಡಲಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಹೆಚ್ಚಿನ ಒತ್ತನ್ನು ಕೊಡಲಾಗಿದೆ. ಕಾಲೋನಿಗಳಲ್ಲಿ ಒಂದೇ ಮನೆಗಳಲ್ಲಿ ಮೂರ್‍ನಾಲ್ಕು ಕುಟುಂಬಗಳು ವಾಸಿಸುತ್ತಿರುವುದು ಗಮನಕ್ಕೆ ಬಂದಿದೆ. ಗುಂಪುಮನೆಗಳನಿರ್ಮಾಣ ಮಾಡಿದರೆ ಫಲಾನುಭವಿಗಳು ಇಂತಿಷ್ಟು ಹಣವನ್ನು ಕಟ್ಟಬೇಕು. ಜಾಗವನ್ನು ಗುರ್ತಿಸಿಕೊಡಲಾಗುವುದು ಎಂದು ಹೇಳಿದರು.
ಗ್ರಾಪಂ ಸದಸ್ಯ ಮಂಜುನಾಥ್ ಮಾತನಾಡಿ, ಆವತಿ ಗ್ರಾಮದ ಹೊಸಬಡಾವಣೆಯಲ್ಲಿ ವಸತಿ ಗೃಹಗಳಿಗೆಹೋಗುವ ರಸ್ತೆಯನ್ನು ಅರಣ್ಯ ಇಲಾಖೆ ಒತ್ತುವರಿಮಾಡಿಕೊಂಡಿದೆ. ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸರ್ವೇ ಇಲಾಖೆ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೇ ಕಾರ್ಯ ಮಾಡಿ ರಸ್ತೆಯನ್ನು ಬಿಡಿಸಿಕೊಡಬೇಕು ಎಂದು ಒತ್ತಾಯಿಸಿದರು.
ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಆವತಿ ತಿಮ್ಮರಾಯಪ್ಪ ಮಾತನಾಡಿ, ಕಾಲೋನಿಗಳಲ್ಲಿ ಎರಡು ಮೂರು ಕುಟುಂಬಗಳು ವಾಸಮಾಡುತ್ತಿದ್ದು, ನಿವೇಶ ನದ ಸಮಸ್ಯೆ ಇದೆ. ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಿಕೊಡಬೇಕು. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮವನ್ನು ಮಾಡಿದರೆ ಸಾಲದು ಗ್ರಾಮಗಳ ಸಮಸ್ಯೆಗಳು ಪರಿಹಾರವಾದರೆ ಮಾತ್ರ ಈ ಕಾರ್ಯಕ್ರಮಗಳು ಅರ್ಥಪೂರ್ಣವಾಗುತ್ತದೆ. ಆವತಿ ಗ್ರಾಮಠಾಣ ವಿಸ್ತರಣೆಯಾಗಬೇಕು. ಆವತಿ ಗ್ರಾಮಕ್ಕೆ ನಿರ್ದಿಷ್ಟವಾದ ನಕ್ಷೆ ಇರುವುದಿಲ್ಲ. ಅಧಿಕಾರಿಗಳು ಇತ್ತ ಗಮನಹರಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡದೆ ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಾರೆ. ಜನರಸಮಸ್ಯೆ ಹೇಗೆ ಅರ್ಥವಾಗುತ್ತದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು.
ತಾಪಂ ಇಒ ಎಚ್.ಡಿ.ವಸಂತ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಸಿಗಬೇಕಾಗಿರುವ ಸೌಲಭ್ಯಗಳಲ್ಲಿ ಲೋಪದೋಷ ವಾಗಿದ್ದರೆ, ನೇರವಾಗಿ ದೂರು ಕೊಡಿ, ಸೌಲಭ್ಯಗಳು ಸಿಗದಿದ್ದಲ್ಲಿ ಅವುಗಳನ್ನು ತಲುಪಿಸುವಂತಹ ಕಾರ್ಯ ಮಾಡಲಾಗುತ್ತದೆ ಎಂದರು.
ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಬೆಸ್ಕಾಂ, ಮೀನುಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಸಿಗುವಂತಹ ಸೌಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ವೃದ್ಧರಿಗೆಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಿದರು.
ಗ್ರಾಪಂ ಅಧ್ಯಕ್ಷರಾದ ಮಮತಾಸಾಮಿ, ಉಪಾಧ್ಯಕ್ಷೆ ಮುನಿರತ್ನಮ್ಮ, ಗ್ರಾಪಂ ಸದಸ್ಯ ಅತ್ತಿಬೆಲೆ ನರಸಪ್ಪ, ಮಂಜುನಾಥ್, ಪಿಡಿಒ ಶಿವರಾಜ್, ಕಾರ್ಯದರ್ಶಿ ಹರೀಂದ್ರ, ರಾಜಸ್ವ ನಿರೀಕ್ಷಕ ಉಪೇಂದ್ರ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.