Advertisement

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

07:02 PM Oct 17, 2021 | Team Udayavani |

ಗಂಗಾವತಿ: ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಯ ಕಡೆಗೆ ಸರಕಾರದ ಕಾರ್ಯಕ್ರಮಕ್ಕೆ ಶನಿವಾರ ಪುನರ್‌ ಚಾಲನೆ ನೀಡಲಾಗಿದೆ. ತಾಲೂಕಿನ ಗುಳದಾಳದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಮಾಡಿದರು. ಗ್ರಾಮ ವಾಸ್ತವ್ಯಕ್ಕಾಗಿ ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳ್ಕರ್‌ ಅವರು ಅ ಧಿಕಾರಿಗಳ ತಂಡದ ಜತೆಗೆ ಎಡದಂಡೆ ಕಾಲುವೆ ರಸ್ತೆಯಲ್ಲಿ ನಡೆದುಕೊಂಡು ಬಂದು ಗ್ರಾಮ ತಲುಪಿದರು.

Advertisement

ಗ್ರಾಮದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮಕ್ಕೆ ಕನಕಗಿರಿ ಶಾಸಕ ಬಸವರಾಜ ದಢೇಸುಗೂರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ  ಧಿಕಾರಿ ವಿಕಾಸ ಕಿಶೋರ ಸುರಳ್ಕರ್‌ ಮಾತನಾಡಿ, ಇನ್ನೂ ಕೆಲ ಗ್ರಾಮಗಳಲ್ಲಿ ಸರಕಾರದ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ. ಸರಿಯಾದ ರಸ್ತೆ ಇಲ್ಲದ ಕಾರಣ ಗುಳದಾಳ ಗ್ರಾಮಕ್ಕೆ ಬಸ್‌ ಸಂಚಾರ ವಿರಳವಾಗಿದೆ.

ಸ್ಮಶಾನಭೂಮಿ ಮಂಜೂರಿ, ರಸ್ತೆ ಅಗಲೀಕರಣ, ನಿವೇಶನ, ವೃದ್ಧರು, ಅಂಗವಿಕಲರಿಗೆ, ವಿಧವೆಯರಿಗೆ ಮಾಸಾಶಕ್ಕೆ ಸಂಬಂಧಿಸಿ ಅರ್ಜಿಗಳು ಬಂದಿವೆ. ಆದ್ಯತೆ ಮೇರೆಗೆ ಸಾರ್ವಜನಿಕರ ಅರ್ಜಿ ವಿಲೇವಾರಿ ಮಾಡಲಾಗುತ್ತದೆ. ವಾಸ್ತವ್ಯ ಮಾಡಿದ ಗ್ರಾಮಗಳಲ್ಲಿ ಅಂಗನವಾಡಿ, ಶಾಲೆ, ಕುಡಿಯುವ ನೀರು, ವೈಯಕ್ತಿಕ ಶೌಚಾಲಯಗಳ ನಿರ್ಮಾಣ, ನ್ಯಾಯಬೆಲೆ ಅಂಗಡಿ ಸಮಸ್ಯೆ ಇತ್ಯರ್ಥ ಹೀಗೆ ಹಲವು ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸಲಾಗುತ್ತದೆ. ಗುಳದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಕೆಲವರು ಒತ್ತುವರಿ ಮಾಡಿದ್ದು, ಜನರು ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು ಶೀಘ್ರ ಒತ್ತುವರಿ ತೆರವು ಮಾಡಿ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಿಇಒ ಫೌಜಿಯಾ ತರನ್ನುಮ್‌, ತಹಶೀಲ್ದಾರ್‌ ಯು. ನಾಗರಾಜ, ಇಒ ಡಾ| ಮೋಹನ್‌, ಡಿಎಸ್‌ಪಿ ರುದ್ರೇಶ ಉಜ್ಜನಕೊಪ್ಪ, ಗ್ರಾಮೀಣ ಸಿಪಿಐ ಉದಯರವಿ ಸೇರಿ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next