Advertisement
ಮುದ್ರಾಡಿ ಗ್ರಾಮ ಪಂಚಾಯತ್ ಕಬ್ಬಿನಾಲೆ ವ್ಯಾಪ್ತಿಯಲ್ಲಿ ಸುಮಾರು 119 ಅರ್ಜಿಗಳು ಬಂದಿದ್ದು ಕಾನೂನಾತ್ಮವಾಗಿ ಇರುವ ಅರ್ಜಿಯ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳದಲ್ಲೆಯೇ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆ ಯವರು ಮಾಹಿತಿ ನೀಡಿದರು. ಸಂಪಿಗೆ ದರ್ಖಾಸ್ತು ಎಂಬಲ್ಲಿಗೆ ಜಿಲ್ಲಾಧಿಕಾರಿ ಬೇಟಿ ನೀಡಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.
Related Articles
Advertisement
ಈ ಭಾಗದ ನೆಟ್‌ವರ್ಕ್ ಸಮಸ್ಯೆ ಕುರಿತಂತೆ ಬಿ.ಎಸ್.ಎನ್.ಎಲ್. ಹಾಗೂ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು.
ಕುಚ್ಚಲಕ್ಕಿ ನೀಡಿ :
ಪಡಿತರ ಅಂಗಡಿಯಲ್ಲಿ ಸ್ಥಳೀಯ ಕುಚ್ಚಲಕ್ಕಿ ನೀಡುವ ಕುರಿತಂತೆ ಸಾರ್ವಜನಿಕ ಮನವಿಗೆ ಉತ್ತರಿಸಿದ ಜಿಲ್ಲಾಧಿಕಾರಿ, ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತೆರೆಯಲಾಗುವ ಖರೀದಿ ಕೇಂದ್ರಗಳಿಗೆ ಜಿಲ್ಲೆಯ ರೈತರು ಭತ್ತವನ್ನು ನೀಡಿದರೆ ಸ್ಥಳೀಯ ಕುಚ್ಚಲಕ್ಕಿ ನೀಡಲು ಸಾಧ್ಯವಾಗಲಿದೆ. ಆದರೆ ಜಿಲ್ಲೆಯ ರೈತರು ಇದುವರೆಗೆ 1 ಕ್ವಿಂಟಾಲ್ ಸಹ ಭತ್ತವನ್ನು ಖರೀದಿ ಕೆಂದ್ರಗಳಿಗೆ ನೀಡಿಲ್ಲ. ಇದರಿಂದ ಸ್ಥಳೀಯ ಕುಚ್ಚಲಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ ಎಂದರು.
ಕಾಂಪೌಂಡ್ ದುರಸ್ತಿ ಇಲ್ಲ :
ಕೊಂಕಣಾರಬೆಟ್ಟು ಶಾಲೆಯ ಕಾಂಪೌಂಡ್ ಕುಸಿದು ಎರಡು ವರ್ಷ ಕಳೆದರೂ ಇನ್ನು ದುರಸ್ತಿಯಾಗಿಲ್ಲ ಎಂಬುದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ ಸಂದರ್ಭದಲ್ಲಿ ಶಾಲೆಗೆ ಭೇಟಿ ನೀಡಿ ಮಾತನಾಡಿ, ಜಿಲ್ಲೆಯ ಎಲ್ಲ ಶಾಲೆ ಅಂಗನವಾಡಿಗಳ ದುರಸ್ತಿಗೆ 2 ಲಕ್ಷ ರೂ. ಪ್ರಾಕೃತಿಕ ವಿಕೋಪ ನಿಧಿಯಡಿ ಬಿಡುಗಡೆಗೊಳಿಸಲಾಗುತ್ತಿದ್ದು, ಕಾಂಪೌಂಡ್ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಅಗತ್ಯವಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಪಿಆರ್‌ಇಡಿ ಎಂಜಿನಿಯರ್‌ಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿವೈಎಸ್ಪಿ ಜೈಶಂಕರ್, ಜಿ.ಪಂ.ಸದಸ್ಯೆ ಜ್ಯೋತಿ ಹರೀಶ್, ತಾ.ಪಂ.ಅಧ್ಯಕ್ಷ ರಮೇಶ್, ಮುದ್ರಾಡಿ ಗ್ರಾ.ಪಂ.ಅಧ್ಯಕ್ಷ ಮಂಜುನಾಥ್ ಹೆಗ್ಡೆ, ನಾಡಾ³ಲು ಗ್ರಾ.ಪಂ.ಅಧ್ಯಕ್ಷ ದಿನೇಶ್ ಹೆಗ್ಡೆ ಉಪಸ್ಥಿತರಿದ್ದರು. ಹೆಬ್ರಿ ತಹಶೀಲ್ದಾರ್ ಪುರಂದರ ಕೆ. ಸ್ವಾಗತಿಸಿ, ವಂದಿಸಿದರು.