Advertisement

ಜ. 30: ನೆಂಚಾರು, ನಾಲ್ಕೂರು ಗ್ರಾಮಗಳಲ್ಲಿ ಡಿಸಿ ವಾಸ್ತವ್ಯ

01:33 AM Jan 28, 2021 | Team Udayavani |

ಉಡುಪಿ:  ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜ. 30 ರಂದು ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಎಲ್ಲ ಅಧಿಕಾರಿಗಳು ಭೇಟಿ ನೀಡಿ ವಾಸ್ತವ್ಯ ಹೂಡಿ ವಿವಿಧ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ ಒದಗಿಸುವರು. ರಾಜ್ಯದಲ್ಲೇ ನಡೆಯುತ್ತಿರುವ ಪ್ರಥಮ ಪೈಲಟ್‌ ಕಾರ್ಯಕ್ರಮವಿದು.

Advertisement

ಗ್ರಾಮ ವಾಸ್ತವ್ಯ ಕುರಿತು ಬುಧವಾರ ಎಲ್ಲ ತಹಸೀ ಲ್ದಾರ್‌ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ನಡೆಸಿದರು.

ಎರಡೂ ಗ್ರಾಮಗಳ  ಜನರ ಕುಂದು ಕೊರತೆ ಗಳ ಕುರಿತಂತೆ ಕಂದಾಯ ಇಲಾಖೆಯ ಅಧಿಕಾರಿಗಳು 3 ದಿನ ಮುಂಚಿತ ವಾಗಿಯೇ ಅರ್ಜಿ ಗಳನ್ನು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕು. ಗ್ರಾಮ ವಾಸ್ತವ್ಯದ ದಿನ ಫ‌ಲಾನುಭವಿಗಳಿಗೆ ಅರ್ಜಿಗೆ ಸಂಬಂಧಿಸಿಂತೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು.  ತಹಶೀಲ್ದಾರ್‌, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿರಬೇಕು ಎಂದರು.

ಅಧಿಕಾರಿಗಳ ಹಾಜರಿ ಕಡ್ಡಾಯ :

ಡಿಒಗಳು, ಪಂಚಾಯತ್‌ಗಳ ಆಡಳಿತಾಧಿಕಾರಿಗಳು ಹಾಗೂ ಕಂದಾಯ ಸಿಬಂದಿ ಹಾಜರಿ ಕಡ್ಡಾಯ. ಜನರು ತಮ್ಮ ಕುಟುಂಬದ ವ್ಯಕ್ತಿ ಮರಣ ಹೊಂದಿದ್ದಲ್ಲಿ ಇಲಾಖೆ ಯಿಂದ ಮರಣ ಪ್ರಮಾಣ ಪತ್ರ ಪಡೆದು, ಪೌತಿ ಖಾತೆ ಬದಲಾಯಿಸಿಕೊಳ್ಳ

Advertisement

ಬೇಕು. ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದ ವ್ಯಕ್ತಿ ಮೃತ ಪಟ್ಟಲ್ಲಿ ಕೂಡಲೇ ಮಾಹಿತಿ ನೀಡಿ ಪಿಂಚಣಿ ಹಣ ಅನರ್ಹರ ಪಾಲಾಗದಂತೆ ಎಚ್ಚರ ವಹಿಸಬೇಕು. ­ಇಲ್ಲ ವಾದಲ್ಲಿ

ಮೃತರ ಹೆಸರಿನಲ್ಲಿ ಪಿಂಚಣಿ ಪಡೆದವರಿಂ ದಲೇ ಮೊತ್ತವನ್ನು ವಸೂಲಿ ಮಾಡಿ, ಅಗತ್ಯ ಕಾನೂನು

ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಇನ್ನಿ ತರ ಅಧಿಕಾರಿಗಳು ಉಪಸ್ಥಿತ ರಿದ್ದರು.

ತಿಂಗಳ 3ನೇ ಶನಿವಾರ :

ಪ್ರತೀ ತಿಂಗಳ 3ನೇ ಶನಿವಾರ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪ ನಿರ್ದೇಶಕರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಉಪ ವಿಭಾಗದ ಸಹಾಯಕ ಆಯುಕ್ತರು, ತಹಶೀಲ್ದಾರ್‌, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮ ವಾಸ್ತವ್ಯ ನಡೆಸುವರು.

ಜಿಲ್ಲಾಧಿಕಾರಿ ಭೇಟಿ ನೀಡುವ ತಾಲೂಕಿನ ತಹಶೀಲ್ದಾರ್‌ ಹೊರತುಪಡಿಸಿ, ಉಳಿದ ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಬೆಳಗ್ಗೆ 10ರಿಂದ 5 ಗಂಟೆಯವರೆಗೆ ವಾಸ್ತವ್ಯ ಮಾಡಬೇಕೆಂದು ಸೂಚಿಸಿದರು.

ಗ್ರಾಮ ವಾಸ್ತವ್ಯದ ವೇಳೆ… :

  •    ಗ್ರಾಮದ ಎಲ್ಲ ಪಹಣಿಯಲ್ಲಿನ ಲೋಪದೋಷಗಳು ಮತ್ತು ಆಕಾರ್‌ ಬಂದ್‌ ತಾಳೆ ಹೊಂದುವ ಕುರಿತು ಖಚಿತಪಡಿಸಿಕೊಳ್ಳಬೇಕು. ಪೌತಿ ಹೊಂದಿದ ಖಾತೆದಾರರ ಹೆಸರನ್ನು, ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ.
  •   ಅರ್ಹ ವ್ಯಕ್ತಿಗಳಿಗೆ ಪಿಂಚಣಿ ದೊರೆಯುತ್ತಿರುವ ಬಗ್ಗೆ ಪರಿಶೀಲನೆ, ಬಿಟ್ಟು ಹೋದ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲೇ ಆದೇಶ ನೀಡುವುದು.
  •  ಶ್ಮಶಾನ ಲಭ್ಯತೆ ಬಗ್ಗೆ ಪರಿಶೀಲನೆ, ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಜಮೀನು ಕಾದಿರಿಸಲು ಕ್ರಮ. ಸರಕಾರಿ ಜಮೀನಿನ ಒತ್ತುವರಿ ತೆರವು.
  •   ಆಧಾರ್‌ ಕಾರ್ಡ್‌ ಅನುಕೂಲದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು.
  •   ಮತದಾರರ ಪಟ್ಟಿ ಪರಿಷ್ಕರಣೆ, ಅತಿವೃಷ್ಠಿ/ಅನಾವೃಷ್ಠಿ ಎದುರಿಸಲು ಕ್ರಮ.
  •   ಬರ/ಪ್ರವಾಹ ಇದ್ದಲ್ಲಿ ಪರಿಹಾರ, ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮಗಳ ಪರಿಶೀಲನೆ, ವಸತಿ ನಿಲಯಗಳ ಪರಿಶೀಲನೆ.
  •  ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಸಿಕ್ಕಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು ಹಾಗೂ ಅನರ್ಹರಿಗೆ ಸಿಕ್ಕಿದ್ದಲ್ಲಿ ಕ್ರಮ ಜರುಗಿಸುವುದು.
  •   ಗುಡಿಸಲು ವಾಸಿಗಳನ್ನು ಪತ್ತೆಹಚ್ಚಿ ವಿವಿಧ ಯೋಜನೆಗಳಡಿ ಮನೆ ಕಟ್ಟಲು ಅನುದಾನ ನೀಡಲು ಅಧಿಕಾರಿಗಳಿಗೆ ಸೂಚಿಸುವುದು.
Advertisement

Udayavani is now on Telegram. Click here to join our channel and stay updated with the latest news.

Next