Advertisement
ಈ ಸಂದರ್ಭದಲ್ಲಿ ಅವರು ಮಾತ ನಾಡಿ, ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಗ್ರಾಮ ಪಂಚಾಯತ್‌ಗಳಿಗೆ ಎರಡನೆಯ ಹಂತದ ಚುನಾವಣೆ ಡಿ.27ರಂದು ನಡೆಯುವ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಶನಿವಾರ ಬೆಳಗ್ಗೆ ಮಸ್ಟರಿಂಗ್ ಆದ ಬಳಿಕ ಆಯಾ ಮತಗಟ್ಟೆಗಳಿಗೆ ಕಳುಹಿಸುವ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಶೇ. 74ರಷ್ಟು ಮತದಾನವಾಗಿದೆ. ಡಿ. 27ರಂದು ಬೆಳಗ್ಗೆ ಗಂಟೆ 7ರಿಂದ ಸಂಜೆ ಗಂಟೆ 5ರ ತನಕ ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಸಾಕಷ್ಟು ಮತದಾರರು ಭಾಗವಹಿಸಬೇಕು ಎನ್ನುವ ನಿಟ್ಟಿನಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.
ಮೊದಲ ಹಂತದ ಚುನಾವಣೆ ನಡೆದ ಕಡೆಗಳಲ್ಲಿ ಕೊರೊನಾ ಕುರಿತು ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಈಗಾಗಲೇ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲರಿಗೂ ಕೂಡಾ ಮಾಸ್ಕ್, ಸ್ಯಾನಿಟೈಸರ್, ಫೇಸ್‌ಶೀಲ್ಡ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಅತ್ಯಂತ ಅಚ್ಚುಕಟ್ಟಿನಿಂದ ಚುನಾವಣೆ ನಡೆಸಲಾಗಿದೆ. ಸಾರ್ವಜನಿಕರಲ್ಲಿ ಈ ಚುನಾವಣೆ ಯಿಂದಾಗಿ ಕೊರೊನಾ ವೈರಸ್ ಹರಡುತ್ತದೆ ಎನ್ನುವ ಆತಂಕ ಬೇಡ; ಬದಲಾಗಿ ಮತದಾನಕ್ಕೆ ಬರುವ ಸಂದರ್ಭ ಕಡ್ಡಾಯ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿದೆ. ಒಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.